ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸಿರುವ ಈ ಟೂರ್ನಿಯಲ್ಲಿ ತನ್ನ ಪಂದ್ಯಗಳನ್ನು ಶ್ರೀಲಂಕಾಕ್ಕೆ ಸ್ಥಳಾಂತರಿಸುವಂತೆ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ (BCB), ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯನ್ನು (ICC) ಕೋರಿತ್ತು. ಆದರೆ, ಆ ಮನವಿಯನ್ನು ಐಸಿಸಿ ತಿರಸ್ಕರಿಸಿದೆ. ಟೂರ್ನಿಯಲ್ಲಿ ಭಾಗವಹಿಸುವುದಾದರೆ, ಭಾರತದಲ್ಲಿ ಆಡಲೇಬೇಕಾಗುತ್ತದೆ ಎಂದು ಐಸಿಸಿ ಸ್ಪಷ್ಟಪಡಿಸಿದೆ. ಇದರ ಬೆನ್ನಲ್ಲೇ ಪ್ರತಿಕ್ರಿಯೆ ನೀಡಿರುವ ಬಿಸಿಬಿ, ತನ್ನ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದಿದೆ.