ಐಸಿಸಿಯ ಒಟ್ಟು 5 ಟೂರ್ನಿಗಳಲ್ಲಿ ಹಾಲಿ ಚಾಂಪಿಯನ್ ಆಗಿರುವ ಭಾರತ ತಂಡಗಳನ್ನು ಸಮಾರಂಭದಲ್ಲಿ ಸನ್ಮಾನಿಸಲಾಗುತ್ತದೆ. ಇದರಲ್ಲಿ ರೋಹಿತ್ ಶರ್ಮ ಸಾರಥ್ಯದ 2025ರ ಚಾಂಪಿಯನ್ಸ್ ಟ್ರೋಫಿ ವಿಜೇತ ಭಾರತ ಏಕದಿನ ತಂಡ, ಕನ್ನಡತಿ ನಿಕಿ ಪ್ರಸಾದ್ ನಾಯಕತ್ವದ 2025ರ 19 ವಯೋಮಿತಿ ಮಹಿಳಾ ಟಿ20 ವಿಶ್ವಕಪ್ ವಿಜೇತ ತಂಡ, ಹರ್ಮಾನ್ಪ್ರೀತ್ ಕೌರ್ ಸಾರಥ್ಯದ 2025ರ ಮಹಿಳೆಯರ ಏಕದಿನ ವಿಶ್ವಕಪ್ ವಿಜೇತ ತಂಡ, ಆಯುಷ್ ಮಹಾತ್ರೆ ನೇತೃತ್ವದ 2026ರ 19 ವಯೋಮಿತಿ ಏಕದಿನ ವಿಶ್ವಕಪ್ ವಿಜೇತ ತಂಡಗಳು ಸೇರಿವೆ. ಈ ಎಲ್ಲ 5 ತಂಡಗಳ ಸದಸ್ಯರನ್ನು ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಆಹ್ವಾನಿಸಲಾಗಿದೆ.