ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಚೆನ್ನೈ ತಂಡಕ್ಕೆ ಆರಂಭದಲ್ಲಿ ಋತುರಾಜ್ ಗಾಯಕ್ವಾಡ್ (15) ವಿಕೆಟ್ ಕಳೆದುಕೊಂಡು ಹಿನ್ನಡೆಯಾದರೂ, ನಂತರ ಬಂದ ಸಂಜು ಸ್ಯಾಮ್ಸನ್ ಚಂಡಮಾರುತದಂತೆ ಅಬ್ಬರಿಸಿದರು. ಡೆಲ್ಲಿ ಬೌಲರ್‌ಗಳನ್ನು ಮನಬಂದಂತೆ ಚಚ್ಚಿದ ಸ್ಯಾಮ್ಸನ್, ಕೇವಲ 56 ಎಸೆತಗಳಲ್ಲಿ ಅಜೇಯ 115 ರನ್ (15 ಬೌಂಡರಿ, 4 ಸಿಕ್ಸರ್) ಸಿಡಿಸಿ ಚೆಪಾಕ್ ಮೈದಾನದಲ್ಲಿ ಸಿಕ್ಸರ್‌ಗಳ ಮಳೆ ಸುರಿಸಿದರು.