ರೆವ್‌ಸ್ಪೋರ್ಟ್ಸ್ ವರದಿ ಪ್ರಕಾರ, ಟೀಮ್ ಇಂಡಿಯಾ, ನಮೀಬಿಯಾ, ಪಾಕಿಸ್ತಾನ, ನೆದರ್‌ಲ್ಯಾಂಡ್ಸ್ ಮತ್ತು ಯುಎಸ್‌ಎ ತಂಡಗಳು ಒಂದು ಗುಂಪಿನಲ್ಲಿವೆ. ಇನ್ನು ಭಾರತ-ಪಾಕ್ ನಡುವಿನ ಹೈವೋಲ್ಟೇಜ್ ಕದನಕ್ಕೆ ದಿನಾಂಕ ಫಿಕ್ಸ್ ಆಗಿದ್ದು, ಫೆಬ್ರವರಿ 15ರಂದು ಕೊಲಂಬೊದಲ್ಲಿ ಪಂದ್ಯ ನಡೆಯಲಿದೆ ಎಂದು ತಿಳಿಸಲಾಗಿದೆ. ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸಿರುವ ಈ ಟೂರ್ನಿ ಫೆಬ್ರವರಿ 7ರಿಂದ ಮಾರ್ಚ್ 8ರವರೆಗೆ ನಡೆಯಲಿದೆ.