DCvsPBKS: ಪಂಜಾಬ್ ಕಿಂಗ್ಸ್‌ಗೆ ಸತತ ಸೋಲು: ಅಕ್ಷರ್-ಮಿಲ್ಲರ್ ಮಿಂಚಿನ ಆಟಕ್ಕೆ ಮಣಿದ ಪ್ರೀತಿ ಜಿಂಟಾ ಪಡೆ

DCvsPBKS
DCvsPBKS
Published on
ಧರ್ಮಶಾಲಾ: ಇಲ್ಲಿನ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ಸೋಮವಾರ ನಡೆದ ಐಪಿಎಲ್ 2026ರ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ (DC), ಪಂಜಾಬ್ ಕಿಂಗ್ಸ್ (PBKS) ವಿರುದ್ಧ 3 ವಿಕೆಟ್‌ಗಳ ರೋಚಕ ಜಯ ಸಾಧಿಸಿದೆ. ಇದರೊಂದಿಗೆ ಪಂಜಾಬ್ ಕಿಂಗ್ಸ್ ತಂಡದ ಸೋಲಿನ ಸರಪಳಿ ಮುಂದುವರಿದಿದೆ.

ಅಕ್ಷರ್-ಮಿಲ್ಲರ್ ಹೋರಾಟ

211 ರನ್‌ಗಳ ಬೃಹತ್ ಗುರಿಯನ್ನು ಬೆನ್ನಟ್ಟಿದ ಡೆಲ್ಲಿ ಕ್ಯಾಪಿಟಲ್ಸ್ ಆರಂಭಿಕ ಕುಸಿತ ಕಂಡಿತು. ಅಭಿಷೇಕ್ ಪೋರೆಲ್ (5), ಕೆ.ಎಲ್. ರಾಹುಲ್ (9) ಮತ್ತು ಸಾಹಿಲ್ ಪರಖ್ (13) ಅಲ್ಪ ಮೊತ್ತಕ್ಕೆ ಔಟಾದಾಗ ತಂಡ ಸಂಕಷ್ಟಕ್ಕೆ ಸಿಲುಕಿತ್ತು. ಈ ಹಂತದಲ್ಲಿ ಜೊತೆಯಾದ ಅಕ್ಷರ್ ಪಟೇಲ್ ಮತ್ತು ಡೇವಿಡ್ ಮಿಲ್ಲರ್ ಸ್ಫೋಟಕ ಅರ್ಧಶತಕಗಳ ಮೂಲಕ ತಂಡಕ್ಕೆ ಆಸರೆಯಾದರು. ಅಕ್ಷರ್ ಪಟೇಲ್ ಕೇವಲ 30 ಎಸೆತಗಳಲ್ಲಿ 56 ರನ್ ಸಿಡಿಸಿದರೆ, ಮಿಲ್ಲರ್ 28 ಎಸೆತಗಳಲ್ಲಿ 51 ರನ್ ಚಚ್ಚಿದರು. ಅಂತಿಮವಾಗಿ ಮೊಹಮ್ಮದ್ ನಬಿ ಅಬ್ಬರದ ಆಟದೊಂದಿಗೆ ಡೆಲ್ಲಿ 19 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 216 ರನ್ ಗಳಿಸಿ ಗೆಲುವಿನ ನಗೆ ಬೀರಿದರು.

ಪಂಜಾಬ್ ಕಿಂಗ್ಸ್ ಬ್ಯಾಟಿಂಗ್

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ ಕಿಂಗ್ಸ್, ನಿಗದಿತ 20 ಓವರ್‌ಗಳಲ್ಲಿ 210/5 ರನ್ ಗಳಿಸಿತ್ತು. ಆರಂಭಿಕ ಆಟಗಾರ ಪ್ರಿಯಾಂಶ್ ಆರ್ಯ 33 ಎಸೆತಗಳಲ್ಲಿ 56 ರನ್ ಬಾರಿಸಿ ಭರ್ಜರಿ ಆರಂಭ ನೀಡಿದರೆ, ನಾಯಕ ಶ್ರೇಯಸ್ ಅಯ್ಯರ್ 36 ಎಸೆತಗಳಲ್ಲಿ ಅಜೇಯ 59 ರನ್ ಗಳಿಸಿ ತಂಡಕ್ಕೆ ಆಸರೆಯಾದರು. ಡೆಲ್ಲಿ ಪರ ಮಾಧವ್ ತಿವಾರಿ ಮತ್ತು ಮಿಚೆಲ್ ಸ್ಟಾರ್ಕ್ ತಲಾ 2 ವಿಕೆಟ್ ಪಡೆದರು,(ಏಜೆನ್ಸೀಸ್​).
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net