ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯ ನಂತರ ರೋಹಿತ್‌ರನ್ನು ಕೈಬಿಟ್ಟು ಹೊಸ ಆಟಗಾರರಿಗೆ ಅವಕಾಶ ನೀಡಲು ಆಯ್ಕೆ ಸಮಿತಿ ತೀರ್ಮಾನಿಸಿತ್ತು. ಆಯ್ಕೆ ಸಮಿತಿ ಸದಸ್ಯ ಹಾಗೂ ಗೆಳೆಯ ಪ್ರಜ್ಞಾನ್ ಓಜಾ, ಈ ತೀರ್ಮಾನವನ್ನು ರೋಹಿತ್ ಎದುರು ಪ್ರಸ್ತಾಪಿಸಿದರು. ಆದರೆ, 2027ರ ವಿಶ್ವಕಪ್ ಆಡುವ ಗುರಿ ಹೊಂದಿರುವ ರೋಹಿತ್, ಆಯ್ಕೆ ಸಮಿತಿ ಹಿರಿಯ ಆಟಗಾರರನ್ನು ನಡೆಸಿಕೊಳ್ಳುತ್ತಿರುವ ಬಗ್ಗೆ ಬಿಸಿಸಿಐ ಹಿರಿಯ ಅಧಿಕಾರಿಗಳ ಬಳಿ ಬೇಸರ ವ್ಯಕ್ತಪಡಿಸಿದ್ದರು.