ಹೌದು, ಮಾರ್ಚ್ 28ರಂದು 2026ನೇ ಸಾಲಿನ ಹಾಗೂ 19ನೇ ಐಪಿಎಲ್ ಸೀಸನ್ ಆರಂಭವಾಗಲಿದೆ. ಇದಕ್ಕೂ ಮುನ್ನ ಶುಕ್ರವಾರ (ಮಾರ್ಚ್ 20) ಕೋಲ್ಕತ್ತ ನೈಟ್ ರೈಡರ್ಸ್ ತಂಡ ಪತ್ರಿಕಾಗೋಷ್ಠಿ ನಡೆಸಿತು. ಈ ವೇಳೆ ಕೆಕೆಆರ್ ನಾಯಕ ಅಜಿಂಕ್ಯ ರಹಾನೆ, ಸಹಾಯಕ ಕೋಚ್ ಶೇನ್ ವ್ಯಾಟ್ಸನ್, ಮುಖ್ಯ ಕೋಚ್ ಅಭಿಷೇಕ್ ನಾಯರ್ ಮತ್ತು ಮಾರ್ಗದರ್ಶಕ ಬ್ರಾವೋ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿದ್ದರು.