Virat Kohli : ಟೀಮ್ ಇಂಡಿಯಾ ಹಾಗೂ ಇಂಗ್ಲೆಂಡ್ ನಡುವಿನ ಟಿ20 ಸರಣಿಯ ಎರಡನೇ ಪಂದ್ಯದಲ್ಲಿ ಇಂಗ್ಲೆಂಡ್ ತಂಡ 4 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಸರಣಿಯ ಮೊದಲ ಪಂದ್ಯ ಮಳೆಗೆ ಆಹುತಿಯಾಗಿದ್ದರೆ, ಶನಿವಾರ ನಡೆದ ಎರಡನೇ ಪಂದ್ಯದಲ್ಲಿ ಇಂಗ್ಲೆಂಡ್‌ನ ಯುವ ಆಟಗಾರ ಜೇಕಬ್ ಬೆಥೆಲ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿ, ಏಕಾಂಗಿಯಾಗಿ 76 ರನ್ ಸಿಡಿಸುವ ಮೂಲಕ ತಂಡವನ್ನು ಗೆಲುವಿನ ದಡ ತಲುಪಿಸಿದರು. ಆದರೆ, ಈ ಅದ್ಭುತ ಗೆಲುವಿನ ಬೆನ್ನಲ್ಲೇ ಇಂಗ್ಲೆಂಡ್‌ನ ಮಾಜಿ ನಾಯಕ ಹಾಗೂ ಖ್ಯಾತ ಕಾಮೆಂಟೇಟರ್ ನಾಸಿರ್ ಹುಸೇನ್ ಅತ್ಯಂತ ಆಸಕ್ತಿದಾಯಕ ಮತ್ತು ಚರ್ಚಾಸ್ಪದ ಹೇಳಿಕೆಯೊಂದನ್ನು ನೀಡಿದ್ದು, ಕ್ರಿಕೆಟ್ ವಲಯದಲ್ಲಿ ಭಾರಿ ಸಂಚಲನ ಮೂಡಿಸಿದೆ.