ತಮ್ಮ ಅಂತಾರಾಷ್ಟ್ರೀಯ ಚೊಚ್ಚಲ ಪಂದ್ಯದಲ್ಲೇ ಹೊಸ ದಾಖಲೆ ನಿರ್ಮಿಸಿದ ವೈಭವ್ಗೆ ಕ್ರಿಕೆಟ್ ಪ್ರೇಮಿಗಳು ಮತ್ತು ಹಿರಿಯ ಕ್ರಿಕೆಟಿಗರಿಂದ ಅಭಿನಂದನೆಗಳ ಮಹಾಪೂರವೇ ಹರಿದುಬಂದಿತು. ಮತ್ತೊಂದೆಡೆ, ಇಂಗ್ಲೆಂಡ್ ವಿರುದ್ಧದ ಎರಡನೇ ಟಿ20 ಮ್ಯಾಚ್ನಲ್ಲಿ ಎರಡು ಸಿಕ್ಸರ್ಗಳನ್ನು ಬಾರಿಸಿ 12 ರನ್ಗೆ ಔಟ್ ಆದ ವೈಭವ್, ದುಪ್ಪಟ್ಟು ನಿರೀಕ್ಷೆಯಿಟ್ಟುಕೊಂಡಿದ್ದ ಅಭಿಮಾನಿಗಳಿಗೆ ನಿರಾಶೆ ಮಾಡಿದರು. ಇದನ್ನೇ ಗುರಿಯಾಗಿಸಿ ಮಾತನಾಡಿರುವ ಆಕಾಶ್ ಚೋಪ್ರಾ, ಸಂಜು ಸ್ಯಾಮ್ಸನ್, ಅಭಿಷೇಕ್ ಶರ್ಮ ಮತ್ತು ಇಶಾನ್ ಕಿಶನ್ರನ್ನು ಆಡಿಸಲೇಬೇಡಿ ಎಂದಿದ್ದಾರೆ.