ಬೆಂಗಳೂರು: ಭಾರತ ಟೆಸ್ಟ್ ತಂಡದ ವಿಕೆಟ್ ಕೀಪರ್-ಬ್ಯಾಟರ್, RCB ಮಾಜಿ ಆಟಗಾರ(ಕೀಪರ್), ಆಂಧ್ರಪ್ರದೇಶ ಮೂಲದ ಕೋನಾ ಶ್ರೀಕರ್ ಭರತ್ (ಕೆ.ಎಸ್. ಭರತ್) ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ದಿಢೀರ್ ವಿದಾಯ ಘೋಷಿಸುವ ಮೂಲಕ ಕ್ರಿಕೆಟ್ ಪ್ರಿಯರಿಗೆ ಶಾಕ್ ನೀಡಿದ್ದಾರೆ. ಕೇವಲ 32ನೇ ವಯಸ್ಸಿನಲ್ಲಿಯೇ ಅವರು ಅಂತರರಾಷ್ಟ್ರೀಯ ಕ್ರಿಕೆಟ್ ಬದುಕಿಗೆ ಮುಕ್ತಾಯ ಹಾಡಿದ್ದು, ಈ ವಿಷಯವನ್ನು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳ ಮೂಲಕ ಹಂಚಿಕೊಂಡಿದ್ದಾರೆ.