ಹರಿಣರ ಪಡೆ ನೀಡಿದ 188 ರನ್‌ಗಳ ಬೃಹತ್ ಗುರಿಯನ್ನು ಬೆನ್ನಟ್ಟುವಲ್ಲಿ ಟೀಮ್ ಇಂಡಿಯಾ ಬ್ಯಾಟ್ಸ್ಮನ್ಗಳು ವಿಫಲರಾದರು. ಅಭಿಷೇಕ್ ಶರ್ಮ, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ರಿಂಕು ಸಿಂಗ್, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ ಸೇರಿ ಸ್ಟಾರ್ ಬ್ಯಾಟರ್ಗಳೇ ಒಂದಂಕಿ ರನ್ ಬಾರಿಸುವ ಮೂಲಕ ಪೆವಿಲಿಯನ್ ಹಾದಿ ಹಿಡಿದರು. ಅದೇ, ಈ ತಂಡದಲ್ಲಿ ವಿರಾಟ್ ಕೊಹ್ಲಿ ಇದ್ದಿದ್ರೆ, ಸವಾಲಿನ ಪರಿಸ್ಥಿತಿಯಲ್ಲೂ ಹೇಗೆ ಗೆಲುವಿನ ಪತಾಕೆ ಹಾರಿಸುತ್ತಿದ್ದರು ಎಂಬುದು ಒಂದು ನಿಮಿಷ ಕ್ರಿಕೆಟ್ ಪ್ರಿಯರಲ್ಲಿ ಕಾಡಿದ್ದಂತು ಅಕ್ಷರಶಃ ನಿಜ. ಇದೇ ಅನುಭವ ಸ್ಟಾರ್ ಆಲ್ರೌಂಡರ್ ಹಾರ್ದಿಕ್ಗೂ ಆಯಿತು.