ಈ ಸೀಸನ್ನಲ್ಲಿ ಆಡಿರುವ ನಾಲ್ಕು ಪಂದ್ಯಗಳಲ್ಲಿ ಮುಂಬೈ ಇಂಡಿಯನ್ಸ್ ಒಂದು ಪಂದ್ಯವನ್ನು ಗೆದ್ದು, ಮೂರು ಪಂದ್ಯಗಳಲ್ಲಿ ಸೋತಿದ್ದು, ಕೇವಲ ಎರಡು ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಎಂಟನೇ ಸ್ಥಾನದಲ್ಲಿದೆ. ಇತ್ತೀಚೆಗೆ ಆರ್ಸಿಬಿ ವಿರುದ್ಧದ ಸೋಲಿನ ನಂತರ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಎದುರಾಳಿಯನ್ನು ನಿಯಂತ್ರಿಸಲು ಹೇಗೆ ಕಾರ್ಯತಂತ್ರಗಳನ್ನು ರೂಪಿಸಬೇಕಿದೆ ಎಂಬುದರ ಕುರಿತು ಮಾತನಾಡಿದರು.