Vaibhav Sooryavanshi : ವೈಭವ್ ಸೂರ್ಯವಂಶಿ ಬಗ್ಗೆ ವಿಶೇಷವಾಗಿ ಹೇಳಬೇಕಿಲ್ಲ. ಏಕಂದರೆ, ಪ್ರಸ್ತುತ ಭಾರತದಲ್ಲಿ ಹೆಚ್ಚು ಬಳಕೆಯಲ್ಲಿರುವ ಹೆಸರಿದು. ತನ್ನ ಅಬ್ಬರದ ಬ್ಯಾಟಿಂಗ್ ಮೂಲಕವೇ ವಿಶ್ವದ ಗಮನ ಸೆಳೆದಿರುವ 15 ವರ್ಷದ ಈ ಬಾಲಕ, ಟೀಮ್ ಇಂಡಿಯಾದ ಭವಿಷ್ಯದ ಸ್ಟಾರ್ ಆಟಗಾರ. ಪ್ರಸ್ತುತ ಐಪಿಎಲ್ನಲ್ಲಿ ಅಬ್ಬರಿಸಿ, ಬೊಬ್ಬಿರಿಯುತ್ತಿರುವ ವೈಭವ್, ಅನುಭವಿ ಬೌಲರ್ಗಳನ್ನೂ ಬೆಂಡೆತ್ತುತ್ತಿದ್ದಾರೆ. ಮೈದಾನಕ್ಕೆ ಇಳಿದಾಗಲೆಲ್ಲ ಬೌಂಡರಿ, ಸಿಕ್ಸರ್ ಮಳೆ ಸುರಿಸುವ ಮೂಲಕ ಅನೇಕ ದಾಖಲೆಗಳನ್ನು ತನ್ನ ಹೆಸರಿಗೆ ಬರೆದುಕೊಂಡಿರುವ ವೈಭವ್, ಕೇವಲ 15 ವರ್ಷದಲ್ಲೇ ತನ್ನದೇಯಾದ ಅಭಿಮಾನಿ ಬಳಗವನ್ನು ಕಟ್ಟಿಕೊಂಡಿದ್ದಾರೆ.