ಪ್ರಸ್ತುತ, ಕೊಲಂಬೊದಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ನಲ್ಲಿ ಲಂಕಾ ಪಡೆಯನ್ನು ಕ್ಲೀನ್ ಸ್ವೀಪ್ ಮಾಡುವತ್ತ ಸಾಗುತ್ತಿರುವ ಟೀಮ್ ಇಂಡಿಯಾ, 2-0 ಅಂತರದಲ್ಲಿ ಸರಣಿ ಗೆಲ್ಲುವ ತವಕದಲ್ಲಿದೆ. ಈ ಮಧ್ಯೆಯೇ, ಆಟಗಾರರ ವಿವಾದವನ್ನು ಬೆನ್ನತ್ತಿದ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ), ಯಶಸ್ವಿ ಜೈಸ್ವಾಲ್ ಮತ್ತು ಅಸಿತಾ ಫೆರ್ನಾಂಡೊಗೆ ಪಂದ್ಯ ಶುಲ್ಕದ ಶೇ.25ರಷ್ಟು ದಂಡ ವಿಧಿಸಿದೆ.