ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡ ಇಂಗ್ಲೆಂಡ್, ಭಾರತಕ್ಕೆ ಬ್ಯಾಟ್ ಮಾಡುವಂತೆ ಆಹ್ವಾನಿಸಿದೆ. ಅಂತೆಯೇ ಬ್ಯಾಟಿಂಗ್ ಶುರು ಮಾಡಿದ ಟೀಮ್ ಇಂಡಿಯಾಗೆ ಸಂಜು ಸ್ಯಾಮ್ಸನ್ರಿಂದ (89 ರನ್) ಉತ್ತಮ ಇನ್ನಿಂಗ್ಸ್ ದೊರಕಿತು. ಅವರ ನಂತರದಲ್ಲಿ ಇಶಾನ್ ಕಿಶನ್ (39), ಶಿವಂ ದುಬೆ (43) ಮತ್ತು ಹಾರ್ದಿಕ್ ಪಾಂಡ್ಯ ಅವರ ಸ್ಪೋಟಕ ಇನ್ನಿಂಗ್ಸ್ ತಂಡದ ಒಟ್ಟು ಮೊತ್ತವನ್ನು 250ರ ಗಡಿದಾಟಿಸಿತು.