ಇತ್ತೀಚೆಗೆ ಶಾರ್ಜಾದಲ್ಲಿ ನಡೆದ ಕ್ರಿಕೆಟ್ ಪಂದ್ಯದ ವೇಳೆ ಭಾರತ ಮತ್ತು ಪಾಕಿಸ್ತಾನದ ಇಬ್ಬರು ಆಟಗಾರರು ಮೈದಾನದಲ್ಲೇ ಕಿತ್ತಾಡಿಕೊಂಡಿದ್ದಾರೆ ಎಂಬ ಬರಹವುಳ್ಳ ವಿಡಿಯೋ ವೈರಲ್ ಆಗಿದೆ. ತಮ್ಮ ತಮ್ಮ ತಂಡದ ಜರ್ಸಿಯಲ್ಲಿ ತೀವ್ರ ವಾಗ್ವಾದ ನಡೆಸುತ್ತಿರುವಾಗ ಎರಡೂ ತಂಡಗಳ ಇನ್ನುಳಿದ ಆಟಗಾರರು ಅವರನ್ನು ಬಿಡಿಸಲು ಪ್ರಯತ್ನಿಸುತ್ತಾರೆ. ಈ ವಿಡಿಯೋವನ್ನು 'vijayma70555375' ಹೆಸರಿನ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಸದ್ಯ ಈ ವಿಡಿಯೋವನ್ನು ಲಕ್ಷಾಂತರ ಜನರು ವೀಕ್ಷಿಸಿದ್ದು, ಆಟಗಾರರು ಮೈದಾನದಲ್ಲಿ ನಿಜವಾಗಿಯೂ ಜಗಳವಾಡಿದ್ದಾರೆಯೇ? ಎಂದು ಪ್ರಶ್ನಿಸುತ್ತಿದ್ದಾರೆ. ಆದರೆ, ವಿಡಿಯೋ ಹಿಂದಿನ ಅಸಲಿಯತ್ತೇ ಬೇರೆ ಇದೆ. ಅದೇನೆಂದು ನಾವೀಗ ತಿಳಿದುಕೊಳ್ಳೋಣ.