ಮೊದಲು ಬ್ಯಾಟಿಂಗ್ ಮಾಡಿದ ಭಾರತ ನಿಗದಿತ 20 ಓವರ್ಗಳಲ್ಲಿ 6 ವಿಕೆಟ್ಗಳ ನಷ್ಟಕ್ಕೆ 175 ರನ್ ಗಳಿಸಿತು. ಭಾರತೀಯ ಬ್ಯಾಟ್ಸ್ಮನ್ಗಳಲ್ಲಿ ಹಾರ್ದಿಕ್ ಪಾಂಡ್ಯ (ಅಜೇಯ 59 ರನ್, 28 ಎಸೆತ, 6 ಬೌಂಡರಿ, 4 ಸಿಕ್ಸರ್) ಆಪತ್ಕಾಲದಲ್ಲಿ ಅರ್ಧಶತಕ ಗಳಿಸಿದರು. ತಿಲಕ್ ವರ್ಮ (26) ಮತ್ತು ಅಕ್ಷರ್ ಪಟೇಲ್ (23) ಉಪಯುಕ್ತ ರನ್ ಕಾಣಿಕೆ ನೀಡುವ ಮೂಲಕ ನಿರ್ಣಾಯಕ ಪಾತ್ರ ವಹಿಸಿದರು.