ಪ್ಲೇಯಿಂಗ್ 11ನಲ್ಲಿ ಬಹುಮುಖ್ಯ ಬದಲಾವಣೆಯಾಗಿ ವಾಷಿಂಗ್ಟನ್ ಸುಂದರ್ ಬದಲಿಗೆ ಅಕ್ಷರ್ ಪಟೇಲ್ ಕಣಕ್ಕಿಳಿಯುವುದು ಬಹುತೇಕ ಖಚಿತವೆಂದೇ ಹೇಳಲಾಗ್ತಿದೆ. ಕಳೆದ ಎರಡು ಪಂದ್ಯಗಳಲ್ಲಿ ಸುಂದರ್, ಹೇಳಿಕೊಳ್ಳುವಂತಹ ಪ್ರದರ್ಶನ ನೀಡಿಲ್ಲ. ದಕ್ಷಿಣ ಆಫ್ರಿಕಾ ವಿರುದ್ಧ 2 ಓವರ್ ಬೌಲ್ ಮಾಡಿ ವಿಕೆಟ್ ಪಡೆಯದೆ ನಿರಾಸೆ ಮೂಡಿಸಿದ್ದಲ್ಲದೇ, 5ನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಬಂದು ಕೇವಲ 11 ರನ್ ಗಳಿಸಿದ್ದರು. ಹೀಗಾಗಿ, ಚೆಪಾಕ್‌ನ ಸ್ಪಿನ್ ಸ್ನೇಹಿ ಪಿಚ್‌ನಲ್ಲಿ ಸ್ಪಿನ್ ದಾಳಿ ನಡೆಸಬಲ್ಲ ಹಾಗೂ ಕೆಳ ಕ್ರಮಾಂಕದಲ್ಲಿ ಉಪಯುಕ್ತ ಬ್ಯಾಟಿಂಗ್ ಮಾಡಬಲ್ಲ ಅಕ್ಷರ್ ಪಟೇಲ್ ಅವರನ್ನು ಆಡಿಸುವ ಸಾಧ್ಯತೆ ದಟ್ಟವಾಗಿದೆ.