ಟೀಮ್ ಇಂಡಿಯಾ ಪರ ಸ್ಪಿನ್ ದಾಳಿ ನಡೆಸಿದ ವರುಣ್ ಚಕ್ರವರ್ತಿ ಒಟ್ಟು 4 ವಿಕೆಟ್‌ಗಳನ್ನು ಪಡೆದು ಮಿಂಚಿದರೆ, ಜಸ್ಪ್ರಿತ್ ಬುಮ್ರಾ 2, ಅರ್ಶ್‌ದೀಪ್ ಸಿಂಗ್ ಮತ್ತು ಹಾರ್ದಿಕ್ ಪಾಂಡ್ಯ ತಲಾ ಒಂದು ವಿಕೆಟ್ ಪಡೆದರು. ಇನ್ನು ಬ್ಯಾಟಿಂಗ್ ವಿಭಾಗದಲ್ಲಿ ತಂಡದ ಪರ ತಿಲಕ್ ವರ್ಮಾ (73) ಮತ್ತು ಹಾರ್ದಿಕ್ ಪಾಂಡ್ಯ (63) ಸ್ಫೋಟಕ ಅರ್ಧಶತಕ ಬಾರಿಸಿದರು. ವಿಶೇಷವಾಗಿ ಪಾಂಡ್ಯ ಬ್ಯಾಟಿಂಗ್ ಮೈದಾನದಲ್ಲಿದ್ದ ಕ್ರಿಕೆಟ್ ಅಭಿಮಾನಿಗಳನ್ನು ಹುಚ್ಚೆದ್ದು ಕುಣಿಯುವಂತೆ ಮಾಡಿತು. ಕೇವಲ 16 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ಹಾರ್ದಿಕ್, ತಮ್ಮ ಮಿಂಚಿನ ಬ್ಯಾಟಿಂಗ್‌ನಿಂದ ಟೀಮ್ ಇಂಡಿಯಾದ ಮೊತ್ತವನ್ನು 200ರ ಗಡಿದಾಟಿಸುವಲ್ಲಿ ಹೆಚ್ಚು ಕೊಡುಗೆ ನೀಡಿದರು.