ಕಿವೀಸ್​​ ವಿರುದ್ಧ ಭಾರತಕ್ಕೆ ಹೀನಾಯ ಸೋಲು: ರೋಹಿತ್, ಕೊಹ್ಲಿ, ಶ್ರೇಯಸ್ ಡಕ್​ ಔಟ್​, 89 ರನ್​ಗೆ ಆಲೌಟ್​! India vs New Zealand 4th ODI

ನ್ಯೂಜಿಲೆಂಡ್ ಗೆಲುವಿನಲ್ಲಿ ವೇಗದ ಬೌಲರ್ ಮ್ಯಾಟ್ ಹೆನ್ರಿ ನಿರ್ಣಾಯಕ ಪಾತ್ರ ವಹಿಸಿದರು. ಭಾರತೀಯ ಬ್ಯಾಟಿಂಗ್ ಬೆನ್ನೆಲುಬು ಮುರಿದ ಹೆನ್ರಿ, 9.4 ಓವರ್‌ಗಳಲ್ಲಿ 2 ಮೇಡನ್ ಸಹಿತ ಕೇವಲ 27 ರನ್ ನೀಡಿ ಪ್ರಮುಖ 6 ವಿಕೆಟ್‌ಗಳನ್ನು ಕಬಳಿಸಿ ಮಿಂಚಿದರು.
India vs New Zealand 4th ODI
ಕಿವೀಸ್​​ ವಿರುದ್ಧ ಭಾರತಕ್ಕೆ ಹೀನಾಯ ಸೋಲು: ರೋಹಿತ್, ಕೊಹ್ಲಿ, ಶ್ರೇಯಸ್ ಡಕ್​ ಔಟ್​, 89 ರನ್​ಗೆ ಆಲೌಟ್​!
Published on: 

ವೆಲ್ಲಿಂಗ್ಟನ್​: ಮೌಂಟ್ ಮೌಂಗನುಯಿಯ ಬೇ ಓವಲ್ ಮೈದಾನದಲ್ಲಿ ಇಂದು (ನ.13) ನಡೆದ ನ್ಯೂಜಿಲೆಂಡ್ ವಿರುದ್ಧದ ನಾಲ್ಕನೇ ಏಕದಿನ ಪಂದ್ಯದಲ್ಲಿ ( India vs New Zealand 4th ODI ) ಟೀಮ್ ಇಂಡಿಯಾ ಹೀನಾಯ ಸೋಲು ಅನುಭವಿಸಿತು. ಸರಣಿ ವಶಪಡಿಸಿಕೊಳ್ಳುವ ತವಕದಲ್ಲಿದ್ದ ಭಾರತೀಯ ಬ್ಯಾಟಿಂಗ್ ಪಡೆ, ಕಿವೀಸ್ ವೇಗಿ ಮ್ಯಾಟ್ ಹೆನ್ರಿ ಅವರ ಮಾರಕ ದಾಳಿಗೆ ತತ್ತರಿಸಿ ಕೇವಲ 89 ರನ್‌ಗಳಿಗೆ ಆಲೌಟ್ ಆಗುವ ಮೂಲಕ 244 ರನ್‌ಗಳ ಬೃಹತ್ ಅಂತರದ ಹೀನಾಯ ಸೋಲು ಅನುಭವಿಸಿದೆ.

ವಿಲ್ ಯಂಗ್ ಅವರ ಭರ್ಜರಿ ಶತಕದ ನೆರವಿನಿಂದ ನ್ಯೂಜಿಲೆಂಡ್ ನೀಡಿದ್ದ 334 ರನ್‌ಗಳ ಕಠಿಣ ಗುರಿಯನ್ನು ಬೆನ್ನಟ್ಟಿದ ಭಾರತ, ಆರಂಭದಲ್ಲೇ ಪ್ರಮುಖ ವಿಕೆಟ್‌ಗಳನ್ನು ಕಳೆದುಕೊಂಡು 26.4 ಓವರ್‌ಗಳಲ್ಲಿ ತನ್ನ ಇನ್ನಿಂಗ್ಸ್ ಮುಗಿಸಿತು. ಈ ಗೆಲುವಿನೊಂದಿಗೆ ಆತಿಥೇಯ ನ್ಯೂಜಿಲೆಂಡ್ ತಂಡವು ಐದು ಪಂದ್ಯಗಳ ಸರಣಿಯಲ್ಲಿ ಸರಣಿ ಸಮಬಲ ಆಸೆಯನ್ನು ಜೀವಂತವಾಗಿ ಉಳಿಸಿಕೊಂಡಿದೆ.

Also Read
ಟಿಮ್​ ಸೀಫರ್ಟ್​ ಎದುರು ಆಕ್ರಮಣಕಾರಿಯಾಗಿ ವರ್ತಿಸಿದ ಗುರ್ನೂರ್ ಬ್ರಾರ್: ಶಾಂತಿದೂತನಾದ ಕೊಹ್ಲಿ, ಅಭಿಮಾನಿಗಳು ಅಚ್ಚರಿ! Virat Kohli
India vs New Zealand 4th ODI

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ ತಂಡಕ್ಕೆ ಆರಂಭಿಕ ಆಟಗಾರರಾದ ವಿಲ್ ಯಂಗ್ ಮತ್ತು ಟಿಮ್ ಸೀಫರ್ಟ್ ಅಮೋಘ ಆರಂಭ ಒದಗಿಸಿದರು. ಟಿಮ್ ಸೀಫರ್ಟ್ 48 ಎಸೆತಗಳಲ್ಲಿ 6 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 58 ರನ್ ಗಳಿಸಿ ವಿಕೆಟ್ ಒಪ್ಪಿಸಿದರೆ, ಮತ್ತೊಂದೆಡೆ ಅಬ್ಬರದ ಬ್ಯಾಟಿಂಗ್ ಮುಂದುವರಿಸಿದ ವಿಲ್ ಯಂಗ್ 108 ಎಸೆತಗಳಲ್ಲಿ 14 ಬೌಂಡರಿ ಮತ್ತು 4 ಸಿಕ್ಸರ್‌ಗಳ ನೆರವಿನಿಂದ ಭರ್ಜರಿ 125 ರನ್ ಸಿಡಿಸಿದರು.

ಮಧ್ಯಮ ಕ್ರಮಾಂಕದಲ್ಲಿ ಫಿನ್ ಅಲೆನ್ ಕೇವಲ 30 ಎಸೆತಗಳಲ್ಲಿ 41 ರನ್, ನಾಯಕ ಮಿಚೆಲ್ ಸ್ಯಾಂಟ್ನರ್ 24 ರನ್ ಹಾಗೂ ಕ್ರಿಸ್ಟಿಯನ್ ಕ್ಲಾರ್ಕ್ 22 ರನ್‌ಗಳ ಉಪಯುಕ್ತ ಕಾಣಿಕೆ ನೀಡಿದರು. ಪರಿಣಾಮವಾಗಿ ನ್ಯೂಜಿಲೆಂಡ್ ತಂಡ ನಿಗದಿತ 50 ಓವರ್‌ಗಳಲ್ಲಿ 333 ರನ್‌ಗಳ ಬೃಹತ್ ಮೊತ್ತ ಕಲೆಹಾಕಿ ಆಲೌಟ್ ಆಯಿತು. ಭಾರತದ ಪರ ಅಕ್ಷರ್ ಪಟೇಲ್ 39 ರನ್‌ಗಳಿಗೆ 2 ವಿಕೆಟ್ ಪಡೆದರೆ, ಗುರ್ನೂರ್ ಬ್ರಾರ್ ಮತ್ತು ಆಕಿಬ್ ನಬಿ ತಲಾ 2 ವಿಕೆಟ್ ಹಾಗೂ ಅರ್ಷದೀಪ್ ಸಿಂಗ್ ಮತ್ತು ನಮನ್ ಧೀರ್ ತಲಾ 1 ವಿಕೆಟ್ ಪಡೆದರು.

334 ರನ್‌ಗಳ ಬೃಹತ್ ಗುರಿ ಬೆನ್ನಟ್ಟಿದ ಭಾರತಕ್ಕೆ ಇನ್ನಿಂಗ್ಸ್‌ನ ಮೊದಲ ಓವರ್‌ನಿಂದಲೇ ಆಘಾತಗಳ ಸರಮಾಲೆ ಎದುರಾಯಿತು. ಅನುಭವಿ ಆರಂಭಿಕ ಆಟಗಾರ ರೋಹಿತ್ ಶರ್ಮಾ ಎದುರಿಸಿದ ಮೊದಲ ಎಸೆತದಲ್ಲೇ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದರೆ, ಇದರ ಬೆನ್ನಲ್ಲೇ ವಿರಾಟ್ ಕೊಹ್ಲಿ (4 ಎಸೆತಗಳಲ್ಲಿ 0) ಮತ್ತು ನಾಯಕ ಶ್ರೇಯಸ್ ಅಯ್ಯರ್ (1 ಎಸೆತದಲ್ಲಿ 0) ಕೂಡ ಖಾತೆ ತೆರೆಯದೆ ಪೆವಿಲಿಯನ್ ಸೇರಿಕೊಂಡರು. ರುತುರಾಜ್ ಗಾಯಕ್ವಾಡ್ 5 ರನ್ ಗಳಿಸಿ ಕೈಲ್ ಜೇಮಿಸನ್‌ಗೆ ವಿಕೆಟ್​ ಒಪ್ಪಿಸುವುದರೊಂದಿಗೆ ಭಾರತದ ಅಗ್ರಕ್ರಮಾಂಕ ಸಂಪೂರ್ಣ ಕುಸಿಯಿತು.

Also Read
ಸಂಪ್ರದಾಯಕ್ಕೆ ಬ್ರೇಕ್ ಹಾಕಿ ಸೆಲ್ಫ್ ರೆಸ್ಪೆಕ್ಟ್ ಮ್ಯಾರೇಜ್ ಆದ ಅನಿರುದ್ಧ್-ಕಾವ್ಯಾ: ಏನಿದು ಹೊಸ ಪದ್ಧತಿ? ಇಲ್ಲಿದೆ ಸಂಪೂರ್ಣ ಮಾಹಿತಿ... Self-Respect Marriage
India vs New Zealand 4th ODI

ತಂಡ ಸಂಕಷ್ಟದಲ್ಲಿದ್ದಾಗ ವಿಕೆಟ್ ಕೀಪರ್ ಇಶಾನ್ ಕಿಶನ್ (53 ಎಸೆತಗಳಲ್ಲಿ 27 ರನ್), ಅಕ್ಷರ್ ಪಟೇಲ್ (36 ಎಸೆತಗಳಲ್ಲಿ 21 ರನ್) ಮತ್ತು ನಮನ್ ಧೀರ್ (24 ಎಸೆತಗಳಲ್ಲಿ 21 ರನ್) ಒಂದಷ್ಟು ಪ್ರತಿರೋಧ ತೋರಲು ಪ್ರಯತ್ನಿಸಿದರಾದರೂ ತಂಡವನ್ನು ಸೋಲಿನಿಂದ ಪಾರು ಮಾಡಲು ಸಾಧ್ಯವಾಗಲಿಲ್ಲ. ಕೆಳಕ್ರಮಾಂಕದಲ್ಲಿ ಆಕಿಬ್ ನಬಿ 5, ಕುಲದೀಪ್​ ಯಾದವ್ 1 ಹಾಗೂ ಗುರ್ನೂರ್ ಬ್ರಾರ್ 2 ರನ್ ಗಳಿಸಿ ಔಟಾಗುವುದರೊಂದಿಗೆ, ಭಾರತೀಯ ತಂಡ ಕೇವಲ 26.4 ಓವರ್‌ಗಳಲ್ಲಿ 89 ರನ್‌ಗಳಿಗೆ ಸರ್ವಪತನ ಕಂಡಿತು.

ನ್ಯೂಜಿಲೆಂಡ್ ಗೆಲುವಿನಲ್ಲಿ ವೇಗದ ಬೌಲರ್ ಮ್ಯಾಟ್ ಹೆನ್ರಿ ನಿರ್ಣಾಯಕ ಪಾತ್ರ ವಹಿಸಿದರು. ಭಾರತೀಯ ಬ್ಯಾಟಿಂಗ್ ಬೆನ್ನೆಲುಬು ಮುರಿದ ಹೆನ್ರಿ, 9.4 ಓವರ್‌ಗಳಲ್ಲಿ 2 ಮೇಡನ್ ಸಹಿತ ಕೇವಲ 27 ರನ್ ನೀಡಿ ಪ್ರಮುಖ 6 ವಿಕೆಟ್‌ಗಳನ್ನು ಕಬಳಿಸಿ ಮಿಂಚಿದರು. ಇವರಿಗೆ ಉತ್ತಮ ಸಾಥ್ ನೀಡಿದ ಮ್ಯಾಥ್ಯೂ ಫಿಶರ್ 31 ರನ್‌ಗಳಿಗೆ 3 ವಿಕೆಟ್ ಪಡೆದರೆ, ಕೈಲ್ ಜೇಮಿಸನ್ 1 ವಿಕೆಟ್ ಕಿತ್ತರು. ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡೂ ವಿಭಾಗಗಳಲ್ಲಿ ಸಂಪೂರ್ಣ ವೈಫಲ್ಯ ಅನುಭವಿಸಿದ ಟೀಮ್ ಇಂಡಿಯಾ, ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ತನ್ನ ಅತ್ಯಂತ ಕಳಪೆ ಪ್ರದರ್ಶನಗಳಲ್ಲಿ ಒಂದನ್ನು ದಾಖಲಿಸಿತು, (ಏಜೆನ್ಸೀಸ್​).