ಟಿ20 ವಿಶ್ವಕಪ್​ ಗೆಲುವಿನ ಬೆನ್ನಲ್ಲೇ ವೈವಾಹಿಕ ಜೀವನಕ್ಕೆ ಕಾಲಿಡಲು ಸಜ್ಜಾದ ಕುಲದೀಪ್​ ಯಾದವ್​

ಟಿ20 ವಿಶ್ವಕಪ್​ ಗೆಲುವಿನ ಬೆನ್ನಲ್ಲೇ ವೈವಾಹಿಕ ಜೀವನಕ್ಕೆ ಕಾಲಿಡಲು ಸಜ್ಜಾದ ಕುಲದೀಪ್​ ಯಾದವ್​
ಟಿ20 ವಿಶ್ವಕಪ್​ ಗೆಲುವಿನ ಬೆನ್ನಲ್ಲೇ ವೈವಾಹಿಕ ಜೀವನಕ್ಕೆ ಕಾಲಿಡಲು ಸಜ್ಜಾದ ಕುಲದೀಪ್​ ಯಾದವ್​
Published on
ಲಖನೌ: ಸತತ 2ನೇ ಟಿ20 ವಿಶ್ವಕಪ್​ ಗೆದ್ದ ಬೆನ್ನಲ್ಲೇ ಭಾರತ ತಂಡದ ಸ್ಪಿನ್ನರ್​ ಕುಲದೀಪ್​ ಯಾದವ್​ (Kuldeep yadav) ವೈವಾಹಿಕ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಅವರು ಮಾರ್ಚ್​ 14ರಂದು ಉತ್ತರಾಖಂಡದ ಮಸ್ಸೂರಿಯ ರೆಸಾರ್ಟ್​ನಲ್ಲಿ ಗೆಳತಿ ವಂಶಿಕಾ ಅವರನ್ನು ವರಿಸಲಿದ್ದಾರೆ.

ಮಾರ್ಚ್​ 13ರಂದು ಹಳದಿ ಮತ್ತು ಮೆಹಂದಿ ಸಮಾರಂಭ ನಡೆಯಲಿದೆ. ಮಾರ್ಚ್​ 17ರಂದು ಲಖನೌದಲ್ಲಿ ಆರತಕ್ಷತೆ ಕಾರ್ಯಕ್ರಮ ನಿಗದಿಯಾಗಿದ್ದು, ಇದಕ್ಕೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರಿಗೂ ಆಹ್ವಾನ ನೀಡಲಾಗಿದೆ. ಕಳೆದ ವರ್ಷ ಜೂನ್​ನಲ್ಲಿ ಇವರಿಬ್ಬರ ನಿಶ್ಚಿತಾರ್ಥ ನಡೆದಿತ್ತು.

ಕಳೆದ ವರ್ಷ ನವೆಂಬರ್​ನಲ್ಲೇ ಅವರ ವಿವಾಹ ನಿಗದಿಯಾಗಿತ್ತು. ಆದರೆ ಕುಲದೀಪ್​ ಟಿ20 ವಿಶ್ವಕಪ್​ ತಂಡಕ್ಕೆ ಆಯ್ಕೆಯಾದ ಬೆನ್ನಲ್ಲೇ ವಿವಾಹವನ್ನು ಮುಂದೂಡಲಾಗಿತ್ತು. ವಿಶ್ವಕಪ್​ನಲ್ಲಿ ಪಾಕಿಸ್ತಾನ ವಿರುದ್ಧದ ಏಕಮಾತ್ರ ಪಂದ್ಯದಲ್ಲಿ ಆಡಿದ್ದ ಕುಲದೀಪ್​ 14 ರನ್​ಗಳಿಗೆ 1 ವಿಕೆಟ್​ ಕಬಳಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net