Abhishek Sharma : ಸನ್ರೈಸರ್ಸ್ ಹೈದರಾಬಾದ್ (SRH) ತಂಡದ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಪ್ರಸ್ತುತ ನಡೆಯುತ್ತಿರುವ 19ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ತಮ್ಮ ಬಿರುಗಾಳಿಯ ಬ್ಯಾಟಿಂಗ್ ಮೂಲಕ ಕ್ರೀಡಾಭಿಮಾನಿಗಳ ಗಮನ ಸೆಳೆಯುತ್ತಿದ್ದಾರೆ. ಮಂಗಳವಾರ (ಏಪ್ರಿಲ್ 21) ಹೈದರಾಬಾದ್ನ ಉಪ್ಪಲ್ ಮೈದಾನದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಅಬ್ಬರಿಸಿ ಬೊಬ್ಬಿರಿದ ಅಭಿಷೇಕ್, ಕೇವಲ 68 ಎಸೆತಗಳಲ್ಲಿ 10 ಬೌಂಡರಿ ಮತ್ತು 10 ಸಿಕ್ಸರ್ಗಳ ಸಹಾಯದಿಂದ ಅಜೇಯ 135 ರನ್ ಗಳಿಸಿದರು. ಅಲ್ಲದೆ, ಎಸ್ಆರ್ಎಚ್ ತಂಡ ಡೆಲ್ಲಿ ವಿರುದ್ಧ 47 ರನ್ಗಳಿಂದ ರೋಚಕ ಜಯ ಸಾಧಿಸಿತು. ಸನ್ರೈಸರ್ಸ್ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ ಅಭಿಷೇಕ್ ಶರ್ಮಾರಿಗೆ ಪಂದ್ಯಶ್ರೇಷ್ಠ ಪ್ರಶಸ್ತಿ ನೀಡಲಾಯಿತು.