Inzamam ul Haq : ನಿನ್ನೆ (ಫೆ.07) ಆರಂಭವಾದ ಟಿ20 ವಿಶ್ವಕಪ್ ಟೂರ್ನಮೆಂಟ್ನಲ್ಲಿ ಆತಿಥೇಯ ಭಾರತ ತನ್ನ ಮೊದಲ ಗೆಲುವು ದಾಖಲಿಸಿದೆ. ಕ್ರಿಕೆಟ್ ಶಿಶು ಅಮೆರಿಕ ವಿರುದ್ಧ ಟೀಮ್ ಇಂಡಿಯಾ ಜಯ ಸಾಧಿಸಿತು. ಆದರೆ, ಈ ಜಯದ ಹಾದಿ ಅಷ್ಟು ಸುಲಭವಾಗಿರಲಿಲ್ಲ. ನಾಯಕ ಸೂರ್ಯಕುಮಾರ್ ಯಾದವ್ 84 ರನ್ ಗಳಿಸದೇ ಹೋಗಿದ್ದರೆ, ಟೀಮ್ ಇಂಡಿಯಾ ಹೀನಾಯವಾಗಿ ಸೋಲುತ್ತಿತ್ತು. ತಂಡದ ಪ್ರಮುಖ ಬ್ಯಾಟ್ಸ್ಮನ್ಗಳೇ ಒಂದಂಕಿಗೆ ವಿಕೆಟ್ ಒಪ್ಪಿಸಿದರು. ತುಂಬಾ ಶ್ರಮಪಟ್ಟು ಅಮೆರಿಕ ವಿರುದ್ಧ ಭಾರತ ಗೆಲುವು ಸಾಧಿಸಿತು. ಆದರೆ, ಈ ಗೆಲುವು ಪಾಕಿಸ್ತಾನದ ಮಾಜಿ ಆಟಗಾರರಿಗೆ ಹೊಟ್ಟೆಯಲ್ಲಿ ಬೆಂಕಿ ಇಟ್ಟಂತಾಗಿದೆ. ಹೀಗಾಗಿ, ಟೀಮ್ ಇಂಡಿಯಾ ವಿರುದ್ಧ ಗಂಭೀರ ಆರೋಪಗಳನ್ನು ಮಾಡುತ್ತಿದ್ದಾರೆ.