ಒಂದು ವೇಳೆ ಯುವ ಆಟಗಾರ ವೈಭವ್ ಸೂರ್ಯವಂಶಿ ಅವರನ್ನು ಅಂತಿಮ ಹನ್ನೊಂದರ ಬಳಗಕ್ಕೆ ಸೇರಿಸಿಕೊಳ್ಳಬೇಕಾದರೆ, ತಂಡದ ಒಬ್ಬ ಹಿರಿಯ ಆಟಗಾರನನ್ನು ಬೆಂಚ್‌ಗೆ ಸೀಮಿತಗೊಳಿಸುವುದು ಅನಿವಾರ್ಯವಾಗುತ್ತದೆ. ಸದ್ಯದ ಪರಿಸ್ಥಿತಿಯಲ್ಲಿ ಇಂತಹ ನಿರ್ಧಾರ ಕೈಗೊಂಡರೆ, ಸರಣಿ ವೈಫಲ್ಯಗಳಿಂದ ತತ್ತರಿಸುತ್ತಿರುವ ಆರಂಭಿಕ ಆಟಗಾರ ಸಂಜು ಸ್ಯಾಮ್ಸನ್ ಅವರ ಮೇಲೆಯೇ ಈ ಕೈಬಿಡುವಿಕೆಯ ತೂಗುಗತ್ತಿ ಬೀಳುವುದು ನೂರಕ್ಕೆ ನೂರರಷ್ಟು ಖಚಿತವಾಗಿದೆ. ಇದರಿಂದಾಗಿ ನಾಳಿನ ಹೈ-ವೋಲ್ಟೇಜ್ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ಡಗೌಟ್‌ಗೆ ಸೀಮಿತವಾಗಲಿದ್ದು, ಅವರ ಜಾಗದಲ್ಲಿ ವೈಭವ್ ಸೂರ್ಯವಂಶಿ ಮೈದಾನಕ್ಕಿಳಿದು ಟೀಮ್ ಇಂಡಿಯಾ ಪರ ಹೊಸ ದಾಖಲೆಗಳನ್ನು ಬರೆಯಲು ಸಜ್ಜಾಗುತ್ತಿದ್ದಾರೆ ಎನ್ನಲಾಗಿದೆ.