

ನವದೆಹಲಿ: ರಣಜಿ ಟ್ರೋಫಿಯ ಕಳೆದ ಎರಡು ಆವೃತ್ತಿಯಲ್ಲಿ ಒಟ್ಟಾರೆ 104 ವಿಕೆಟ್ ಕಬಳಿಸಿದ್ದ ಜಮ್ಮು ಮತ್ತು ಕಾಶ್ಮೀರದ ವೇಗಿ ಅಕಿಬ್ ನಬಿ ಭಾರತ ಟೆಸ್ಟ್ ತಂಡಕ್ಕೆ ಚೊಚ್ಚಲ ಕರೆ ಪಡೆದಿದ್ದಾರೆ. ಮೊಣಕಾಲಿನ ಗಾಯದ ಸಮಸ್ಯೆಯಿಂದ ಚೇತರಿಸಿಕೊಳ್ಳುತ್ತಿರುವ ಜಸ್‌ಪ್ರೀತ್ ಬುಮ್ರಾ ಬದಲಿಗೆ ಶ್ರೀಲಂಕಾ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಗೆ ಅವರು ತಂಡಕ್ಕೆ ಸೇರ್ಪಡೆಗೊಂಡಿದ್ದಾರೆ.