

ನವದೆಹಲಿ: ಮುಂಬರುವ ಹಾಕಿ ವಿಶ್ವಕಪ್‌ನಲ್ಲಿ ಭಾಗವಹಿಸುವ ಭಾರತ ಪುರುಷ-ಮಹಿಳೆಯರ ತಂಡಗಳ ಜೆರ್ಸಿಯನ್ನು ನೀಲಿಯಿಂದ ಕೇಸರಿ ಬಣ್ಣಕ್ಕೆ ಬದಲಾಯಿಸುವ ನಿರ್ಧಾರದ ಹಿಂದಿನ ಪ್ರಕ್ರಿಯೆಯನ್ನು ಪ್ರಶ್ನಿಸಿರುವ ಹಾಕಿ ಇಂಡಿಯಾ ಅಧ್ಯಕ್ಷ ದಿಲೀಪ್ ಟರ್ಕಿ, ಹಾಕಿ ಇಂಡಿಯಾದ ಚುನಾಯಿತ ಸದಸ್ಯರು ಹಾಗೂ ಕಾರ್ಯಕಾರಿ ಮಂಡಳಿಯ ಒಪ್ಪಿಗೆ ಪಡೆಯದೆ ಇದನ್ನು ಜಾರಿಗೊಳಿಸಲಾಗಿದೆ ಎಂದು ಆರೋಪಿಸಿದ್ದಾರೆ. ಜತೆಗೆ ಈ ಬದಲಾವಣೆಯ ಕುರಿತು ಸೂಕ್ತ ವಿವರಣೆಯ ಉತ್ತರ ನೀಡುವಂತೆ ಸಂಬಂಧಪಟ್ಟ ಹಾಕಿ ಇಂಡಿಯಾ ಅಧಿಕಾರಿಗಳಿಗೆ ಸೂಚಿಸಿದ್ದಾರೆ.