ಬೆಂಗಳೂರು: ಫೆಬ್ರವರಿ 14 ಮತ್ತು 15ರಂದು ಗೋವಾದ ರಸ್ತೆಗಳು ಇಂಡಿಯನ್ ರೇಸಿಂಗ್ ಫೆಸ್ಟಿವಲ್ (IRF) ಗಾಗಿ ಹೈ–ಇಂಟೆನ್ಸಿಟಿ ರೇಸಿಂಗ್ ಕಣವಾಗಿ ಮಾರ್ಪಡಲು ಸಜ್ಜಾಗುತ್ತಿರುವ ಸಂದರ್ಭದಲ್ಲಿ, ನಟ ಹಾಗೂ ತಂಡದ ಮಾಲೀಕರಾದ ಕಿಚ್ಚ ಸುದೀಪ್ ಅವರು ಈ ಕುರಿತು ಮಾತನಾಡಿದ್ದಾರೆ. ಸ್ಟ್ರೀಟ್ ರೇಸಿಂಗ್ ಎನ್ನುವುದು ಸಮಯಸ್ಪೂರ್ತಿ, ಧೈರ್ಯ ಮತ್ತು ಸಂಯಮದ ಪರಮ ಪರೀಕ್ಷೆಯಾಗಿದ್ದು, ಇವೇ ಮೌಲ್ಯಗಳು ‘ಕಿಚ್ಚಾಸ್ ಕಿಂಗ್ಸ್ ಬೆಂಗಳೂರು’ (Kichcha’s Kings Bengaluru) ತಂಡವನ್ನು ನಿರ್ಧರಿಸುತ್ತವೆ ಎಂದು ಅವರು ಹೇಳಿದ್ದಾರೆ.