ಸುಮಾರು 2 ವರ್ಷಗಳ ಹಿಂದೆ ಅಂದರೆ, 2024ರ ಐಪಿಎಲ್ ಆವೃತ್ತಿಯಲ್ಲಿ ಲಖನೌ ಸೂಪರ್ ಜೈಂಟ್ಸ್ ( LSG ) ತಂಡ ಹೀನಾಯವಾಗಿ ಸೋಲುಂಡಿತು. ಪಂದ್ಯದ ನಂತರ, ತಂಡದ ಮಾಲೀಕ ಸಂಜೀವ್ ಗೋಯೆಂಕಾ ಅವರು ಅಂದಿನ ನಾಯಕ ಕೆ.ಎಲ್. ರಾಹುಲ್ ವಿರುದ್ಧ ಮೈದಾನದಲ್ಲೇ ತಮ್ಮ ಆಕ್ರೋಶ ಹೊರಹಾಕಿದ್ದರು. ಇದಕ್ಕೆ ಸಂಬಂಧಿಸಿದ ಫೋಟೋ ಮತ್ತು ವಿಡಿಯೋಗಳು ವೈರಲ್ ಆಗಿ, ಆ ಸಮಯದಲ್ಲಿ ಗೋಯೆಂಕಾ ವಿರುದ್ಧ ಸಾಕಷ್ಟು ಟೀಕೆಗಳು ವ್ಯಕ್ತವಾಗಿದ್ದವು. ಇದಾದ ಬಳಿಕ, ಕೆ.ಎಲ್. ರಾಹುಲ್ ಲಖನೌ ತಂಡ ತೊರೆದರು. ನಂತರ ರಿಷಭ್ ಪಂತ್ ಅವರನ್ನು 27 ಕೋಟಿ ರೂಪಾಯಿಗಳಿಗೆ ಖರೀದಿಸಿ ಲಖನೌ ತಂಡದ ನಾಯಕತ್ವವನ್ನು ಹಸ್ತಾಂತರಿಸಲಾಯಿತು. ಇದೀಗ, ಪಂತ್ಗೂ ಅದೇ ಪರಿಸ್ಥಿತಿ ಎದುರಾಗಿದೆ.