ತಂಡದ ಮಾಲೀಕರು ಹಾಗೂ ಸೈಕಲ್ ಪ್ಯೂರ್ ಅಗರಬತ್ತಿಯ ವ್ಯವಸ್ಥಾಪಕ ನಿರ್ದೇಶಕ ಅರ್ಜುನ್ ರಂಗ ಮಾತನಾಡಿ, "ಮೈಸೂರು ವಾರಿಯರ್ಸ್‌ನ ಉದ್ದೇಶ ಕೇವಲ ಸ್ಪರ್ಧಿಸುವುದಷ್ಟೇ ಅಲ್ಲ, ಪ್ರತಿಭಾವಂತ ಮಹಿಳಾ ಕ್ರಿಕೆಟಿಗರಿಗೆ ವೃತ್ತಿಪರ ವೇದಿಕೆಯಲ್ಲಿ ಮಿಂಚಲು ಅವಕಾಶಗಳನ್ನು ಸೃಷ್ಟಿಸುವುದಾಗಿದೆ. ಮೊದಲ ಸೀಸನ್ ಗೆ ಸಿಕ್ಕ ಪ್ರತಿಕ್ರಿಯೆ ನಮಗೆ ಪ್ರೋತ್ಸಾಹ ನೀಡಿದ್ದು, ಈ ವರ್ಷದ ತಂಡವು ಮತ್ತಷ್ಟು ಯುವತಿಯರು ಕ್ರಿಕೆಟ್ ಕಡೆಗೆ ಆಕರ್ಷಿತರಾಗಲು ಪ್ರೇರಣೆಯಾಗಲಿದೆ ಎಂಬ ವಿಶ್ವಾಸವಿದೆ" ಎಂದು ಆಟಗಾರ್ತಿಯರಿಗೆ ಶುಭ ಹಾರೈಸಿದರು.