ದೇವರೇ ಇಳಿದು ಬಂದ್ರೂ ಅದು ಸಾಧ್ಯವಿಲ್ಲ... ಟೀಮ್​ ಇಂಡಿಯಾ ವಿರುದ್ಧ ನಾಲಿಗೆ ಹರಿಬಿಟ್ಟ ಪಾಕ್​ ಆಟಗಾರ! Mohammad Amir

ಟೀಮ್​ ಇಂಡಿಯಾ ವಿರುದ್ಧ ನಾಲಿಗೆ ಹರಿಬಿಟ್ಟ ಪಾಕ್​ ಆಟಗಾರ ಮೊಹಮ್ಮದ್​ ಅಮೀರ್​ ! Mohammad Amir
ಟೀಮ್​ ಇಂಡಿಯಾ ವಿರುದ್ಧ ನಾಲಿಗೆ ಹರಿಬಿಟ್ಟ ಪಾಕ್​ ಆಟಗಾರ ಮೊಹಮ್ಮದ್​ ಅಮೀರ್​ ! Mohammad Amir
Published on

ಪ್ರಮುಖ ಮುಖ್ಯಾಂಶಗಳು

  • ಟಿ20 ವಿಶ್ವಕಪ್ ಟೂರ್ನಿಯಲ್ಲಿ ಟೀಮ್ ಇಂಡಿಯಾ ಸೆಮಿಫೈನಲ್ ತಲುಪಲು ಇನ್ನೂ ಒಂದು ಪಂದ್ಯ ಗೆಲ್ಲಬೇಕಾಗಿದೆ
  • ಜಿಂಬಾಬ್ವೆಯನ್ನು ಸೋಲಿಸುವ ಮೂಲಕ ಟೀಮ್ ಇಂಡಿಯಾ ಸೆಮಿಫೈನಲ್ ತಲುಪುವ ಭರವಸೆಯನ್ನು ಹೆಚ್ಚಿಸಿಕೊಂಡಿದೆ
  • ವೆಸ್ಟ್ ಇಂಡೀಸ್ ವಿರುದ್ಧದ ಕೊನೆಯ ಪಂದ್ಯವನ್ನೂ ಗೆದ್ದು ಭಾರತ ಸೆಮೀಸ್​ ಲಗ್ಗೆ ಇಡಲಿದೆ ಎಂಬ ಮಾತಿದೆ
Mohammad Amir : ಪ್ರಸ್ತುತ ನಡೆಯುತ್ತಿರುವ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಟೀಮ್ ಇಂಡಿಯಾ ಸೆಮಿಫೈನಲ್ ತಲುಪಲು ಇನ್ನೂ ಒಂದು ಪಂದ್ಯ ಗೆಲ್ಲಬೇಕಾಗಿದೆ. ಗುರುವಾರ (ಫೆ.26) ಜಿಂಬಾಬ್ವೆಯನ್ನು ಸೋಲಿಸುವ ಮೂಲಕ ಟೀಮ್ ಇಂಡಿಯಾ ಸೆಮಿಫೈನಲ್ ತಲುಪುವ ಭರವಸೆಯನ್ನು ಹೆಚ್ಚಿಸಿಕೊಂಡಿದೆ. ವೆಸ್ಟ್ ಇಂಡೀಸ್ ವಿರುದ್ಧದ ಕೊನೆಯ ಪಂದ್ಯವನ್ನೂ ಭಾರತ ಗೆಲ್ಲಲಿದೆ ಎಂದು ಹೇಳಲಾಗುತ್ತಿದೆ. ಆದರೆ, ಪಾಕಿಸ್ತಾನ ಭಾರತದ ವಿರುದ್ಧ ವಿಷವನ್ನು ಕಕ್ಕುತ್ತಿದೆ.
ಹೌದು, ಟೀಮ್ ಇಂಡಿಯಾ ಸೆಮಿಫೈನಲ್ ತಲುಪುವುದಿಲ್ಲ ಎಂದು ಪಾಕ್​ ಆಟಗಾರರು ಪ್ರಚಾರ ಮಾಡುತ್ತಿದ್ದಾರೆ. ಇದರ ಭಾಗವಾಗಿ, ಪಾಕಿಸ್ತಾನದ ವೇಗದ ಬೌಲರ್​ ಮೊಹಮ್ಮದ್ ಅಮೀರ್ ಕೂಡ ಪ್ರತಿಕ್ರಿಯಿಸಿದ್ದಾರೆ. ತಲೆಕೆಳಗಾಗಿ ತಪಸ್ಸು ಮಾಡಿದರೂ ಟೀಮ್ ಇಂಡಿಯಾ ಟಿ20 ವಿಶ್ವಕಪ್ ಟೂರ್ನಿಯ ಸೆಮಿಫೈನಲ್ ತಲುಪುವುದಿಲ್ಲ ಎಂದಿದ್ದಾರೆ.
ಇತ್ತೀಚಿನ ಸಂದರ್ಶನವೊಂದರಲ್ಲಿ ಭಾಗವಹಿಸಿದ್ದ ಮೊಹಮ್ಮದ್ ಅಮೀರ್, ದೇವರೇ ಬಂದರೂ ಟೀಮ್ ಇಂಡಿಯಾ ಸೆಮಿಫೈನಲ್‌ಗೆ ತಲುಪುವುದಿಲ್ಲ. ಜಿಂಬಾಂಬ್ವೆ ಜತೆಯಲ್ಲೇ ಟೀಮ್ ಇಂಡಿಯಾ ಕೂಡ ಟೂರ್ನಿಯಿಂದ ಹೊರ ಬೀಳುತ್ತದೆ. ವೆಸ್ಟ್ ಇಂಡೀಸ್ ಮತ್ತು ದಕ್ಷಿಣ ಆಫ್ರಿಕಾ ಸೆಮಿಫೈನಲ್ ಪ್ರವೇಶಿಸುತ್ತದೆ. ಮಾರ್ಚ್ 1 ರಂದು ನಡೆಯಲಿರುವ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಟೀಮ್ ಇಂಡಿಯಾ ಭೀಕರವಾಗಿ ಸೋಲುತ್ತದೆ ಎಂದು ಮೊಹಮ್ಮದ್​ ಅಮೀರ್​ ಹೇಳಿದ್ದಾರೆ.
ಟಿ20 ವಿಶ್ವಕಪ್ ಟೂರ್ನಿಯಲ್ಲಿ ಸೆಮಿಫೈನಲ್ ತಲುಪಲು ಟೀಮ್ ಇಂಡಿಯಾ ಇನ್ನೊಂದು ಪಂದ್ಯ ಗೆಲ್ಲಲೇಬೇಕು. ಸೂಪರ್ 8 ರ ಭಾಗವಾಗಿ ಮೊದಲ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಸೋತಿದ್ದ ಟೀಮ್ ಇಂಡಿಯಾ, ಈ ಸೋಲಿನಿಂದ ಪಾಠ ಕಲಿತಿದೆ. ನಿನ್ನೆ ಚೆನ್ನೈನ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಜಿಂಬಾಬ್ವೆಯನ್ನು ಸೋಲಿಸಿತು. ಈ ಗೆಲುವಿನೊಂದಿಗೆ ಟೀಮ್ ಇಂಡಿಯಾ ಸೆಮಿಫೈನಲ್ ತಲುಪುವ ಸಾಧ್ಯತೆಯನ್ನು ಮತ್ತಷ್ಟು ಹೆಚ್ಚಿಸಿಕೊಂಡಿದೆ.
ಮಾರ್ಚ್ 1 ರಂದು ಟೀಮ್ ಇಂಡಿಯಾ ವೆಸ್ಟ್ ಇಂಡೀಸ್ ತಂಡವನ್ನು ಎದುರಿಸಲಿದೆ. ಇದರಲ್ಲಿ ಗೆದ್ದರೆ ಮಾತ್ರ ಟೀಮ್ ಇಂಡಿಯಾ ಸೆಮಿಫೈನಲ್ ತಲುಪಲಿದೆ. ಈ ಪಂದ್ಯಕ್ಕೆ ಮಳೆ ಅಡ್ಡಿಯಾದರೆ ವೆಸ್ಟ್ ಇಂಡೀಸ್ ಸೆಮಿಫೈನಲ್ ತಲುಪಲಿದೆ. ವೆಸ್ಟ್ ಇಂಡೀಸ್ ತಂಡವು ಟೀಮ್ ಇಂಡಿಯಾಕ್ಕಿಂತ ಉತ್ತಮ ರನ್ ರೇಟ್ ಹೊಂದಿದೆ. ಅದಕ್ಕಾಗಿಯೇ ವೆಸ್ಟ್ ಇಂಡೀಸ್ ತಂಡಕ್ಕೆ ಉತ್ತಮ ಅವಕಾಶವಿದೆ, (ಏಜೆನ್ಸೀಸ್​).
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net