ಈ ಕುರಿತು ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಮಾತನಾಡಿರುವ ಆಕಾಶ್ ಚೋಪ್ರಾ, ಶಮಿ ಮತ್ತು ಭುವನೇಶ್ವರ್ ಅವರ ಅಂತಾರಾಷ್ಟ್ರೀಯ ಕ್ರಿಕೆಟ್ ಜೀವನ ಮುಗಿಯುತ್ತಿರುವ ಸೂಚನೆ ಇದು ಎಂದಿದ್ದಾರೆ. ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಭುವನೇಶ್ವರ್ ಹಾಗೂ ಏಕದಿನ ಕ್ರಿಕೆಟ್‌ನಲ್ಲಿ ಶಮಿಯನ್ನು ಪರಿಗಣಿಸಬಹುದಾಗಿತ್ತು. ಆದರೆ, ಆಯ್ಕೆಗಾರರು ಇಬ್ಬರನ್ನೂ ಪರಿಗಣಿಸಿಲ್ಲ ಎಂದು ತಿಳಿಸಿದ್ದಾರೆ.