ಈ ವರ್ಷದ ಮಾರ್ಚ್ ತಿಂಗಳಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿಯಲ್ಲಿ ಮೊಹಮ್ಮದ್ ಶಮಿ ಕೊನೆಯ ಬಾರಿಗೆ ಭಾರತ ಪರ ಆಡಿದ್ದರು. ಆ ಪಂದ್ಯಾವಳಿಯ ನಂತರ, ಶಮಿ ಮತ್ತೆ ಟೀಮ್ ಇಂಡಿಯಾ ಜೆರ್ಸಿಯಲ್ಲಿ ಕಾಣಿಸಿಕೊಂಡಿಲ್ಲ. 2025ರ ಏಷ್ಯಾ ಕಪ್ ಹಾಗೂ ಇಂಗ್ಲೆಂಡ್, ವೆಸ್ಟ್ ಇಂಡೀಸ್, ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಗಳಿಗೂ ಶಮಿ ಅವರನ್ನು ಆಯ್ಕೆದಾರರು ಆಯ್ಕೆ ಮಾಡಲಿಲ್ಲ.