ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ನಡೆಸಿದ ಇಂಗ್ಲೆಂಡ್, ಜೇಕಬ್ ಬೆಥೆಲ್(55 ರನ್, 35 ಎಸೆತ, 4 ಬೌಂಡರಿ, 4 ಸಿಕ್ಸರ್) ಮತ್ತು ನಾಯಕ ಹ್ಯಾರಿ ಬ್ರೂಕ್ (53 ರನ್, 32 ಎಸೆತ, 4 ಬೌಂಡರಿ, 3 ಸಿಕ್ಸರ್) ಅರ್ಧಶತಕಗಳ ನೆರವಿನಿಂದ 7 ವಿಕೆಟ್‌ಗೆ 184 ರನ್‌ಗಳ ಸವಾಲಿನ ಮೊತ್ತ ಪೇರಿಸಿತು. ಪ್ರತಿಯಾಗಿ ದೀಪೇಂದ್ರ ಸಿಂಗ್ (44 ರನ್, 29 ಎಸೆತ, 6 ಬೌಂಡರಿ, 1 ಸಿಕ್ಸರ್) ಹಾಗೂ ನಾಯಕ ರೋಹಿತ್ ಪೌಡೆಲ್ (39 ರನ್, 34 ಎಸೆತ, 2 ಬೌಂಡರಿ, 2 ಸಿಕ್ಸರ್) ಜತೆಯಾಟದಿಂದ ನೇಪಾಳ ಒಂದು ಹಂತದಲ್ಲಿ 14 ಓವರ್‌ಗಳಲ್ಲಿ 123 ರನ್‌ಗಳಿಸಿ ಸುಸ್ಥಿತಿಯಲ್ಲಿತ್ತು.