ನವದೆಹಲಿ: ಕ್ರಿಕೆಟ್ ದಿಗ್ಗಜರಾದ ರೋಹಿತ್ ಶರ್ಮ ಮತ್ತು ವಿರಾಟ್ ಕೊಹ್ಲಿ ಅವರನ್ನು ಟೀಮ್ ಇಂಡಿಯಾದಲ್ಲಿ ನೋಡಲು ತೀವ್ರ ಕುತೂಹಲದಿಂದ ಕಾಯುತ್ತಿರುವ ಕ್ರಿಕೆಟ್ ಅಭಿಮಾನಿಗಳು, 2027ರ ಏಕದಿನ ವಿಶ್ವಕಪ್ ಯಾವಾಗ ಆರಂಭ? ಎಂಬ ಪ್ರಶ್ನೆಗಳನ್ನು ಮುಂದಿಟ್ಟಿದ್ದಾರೆ. ಅಂತೆಯೇ, ಇದಕ್ಕೆ ಉತ್ತರ ಲಭಿಸಿದ್ದು, ಮುಂದಿನ ವರ್ಷ ಅಕ್ಟೋಬರ್ 04ರಿಂದ ಟೂರ್ನಿ ಪ್ರಾರಂಭವಾಗಲಿದೆ ಎಂದು ಇಎಸ್ಪಿನ್ ಕ್ರಿಕ್ ಇನ್ಫೋ ವರದಿ ಮಾಡಿದೆ.