ಈ ಲೀಗ್‌ಗೆ ಅಂತರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ICC) ಮಾನ್ಯತೆ ನೀಡಿದ್ದು, ಕಾಮನ್‌ವೆಲ್ತ್ ಗೇಮ್ಸ್ ಮತ್ತು ಏಷ್ಯನ್ ಗೇಮ್ಸ್ ನಡುವಿನ ಸಮಯದಲ್ಲಿ ಇದು ನಡೆಯಲಿದೆ. ಆಗಸ್ಟ್ 26 ರಿಂದ ಸೆಪ್ಟೆಂಬರ್ 20, 2026 ರವರೆಗೆ ಒಟ್ಟು 33 ಪಂದ್ಯಗಳು ನಡೆಯಲಿವೆ. ಲೀಗ್‌ನ ವಿಶ್ವಾಸಾರ್ಹತೆ ಹೆಚ್ಚಿಸಲು ಸ್ಟೀವ್ ಸ್ಮಿತ್, ಗ್ಲೆನ್ ಮ್ಯಾಕ್ಸ್‌ವೆಲ್, ಫಾಫ್ ಡು ಪ್ಲೆಸಿಸ್ ಮತ್ತು ಮಿಚೆಲ್ ಮಾರ್ಷ್ ಅವರಂತಹ ಘಟಾನುಘಟಿ ಆಟಗಾರರು ಒಪ್ಪಂದ ಮಾಡಿಕೊಂಡಿದ್ದಾರೆ.