ದಕ್ಷಿಣ ಆಫ್ರಿಕಾ ತಂಡದ ಸ್ಟಾರ್ ಆಟಗಾರರಲ್ಲಿ ಒಬ್ಬರಾಗಿದ್ದ 37 ವರ್ಷದ ವ್ಯಾನ್ ಡೆರ್ ಡುಸ್ಸೆನ್, ಎಲ್ಲಾ ಮಾದರಿಯ ಅಂತರಾಷ್ಟ್ರೀಯ ಕ್ರಿಕೆಟ್‌ನಿಂದ ಹೊರಬರುವುದಾಗಿ ಘೋಷಿಸಿದ್ದಾರೆ. ವಯಸ್ಸು ಮತ್ತು ವೈಯಕ್ತಿಕ ಕಾರಣಗಳಿಂದಾಗಿ ಈ ನಿರ್ಧಾರಕ್ಕೆ ಬಂದಿರುವುದಾಗಿ ಅವರು ತಿಳಿಸಿದ್ದಾರೆ. "ದಕ್ಷಿಣ ಆಫ್ರಿಕಾವನ್ನು ಪ್ರತಿನಿಧಿಸುವುದು ನನ್ನ ಪಾಲಿನ ದೊಡ್ಡ ಗೌರವ. ಕಳೆದ ಕೆಲವು ವರ್ಷಗಳ ಪಯಣ ಅದ್ಭುತವಾಗಿತ್ತು. ಈಗ ಹೊಸಬರಿಗೆ ಅವಕಾಶ ಮಾಡಿಕೊಡುವ ಸಮಯ ಬಂದಿದೆ," ಎಂದು ಅವರು ಭಾವನಾತ್ಮಕವಾಗಿ ಹೇಳಿದ್ದಾರೆ.