ಪಂದ್ಯದ ವಿಚಾರಕ್ಕೆ ಬರುವುದಾದರೆ, ನಿನ್ನೆ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು, ನಿಗದಿತ 20 ಓವರ್‌ಗಳಲ್ಲಿ 3 ವಿಕೆಟ್‌ಗಳ ನಷ್ಟಕ್ಕೆ 250 ರನ್‌ಗಳ ಬೃಹತ್ ಮೊತ್ತವನ್ನು ಕಲೆಹಾಕಿತು. ಆರ್‌ಸಿಬಿ ಪರ ಟಿಮ್ ಡೇವಿಡ್ (ಅಜೇಯ 70 ರನ್, 25 ಎಸೆತ, 3 ಬೌಂಡರಿ, 8 ಸಿಕ್ಸರ್) ಮತ್ತು ದೇವದತ್ ಪಡಿಕ್ಕಲ್ (50 ರನ್, 29 ಎಸೆತ, 5 ಬೌಂಡರಿ, 2 ಸಿಕ್ಸರ್) ಮಿಂಚಿನ ಅರ್ಧಶತಕಗಳನ್ನು ಗಳಿಸಿದರು. ನಾಯಕ ರಜತ್ ಪಾಟಿದಾರ್ (ಅಜೇಯ 48 ರನ್, 19 ಎಸೆತ, 1 ಬೌಂಡರಿ, 6 ಸಿಕ್ಸರ್) ಮತ್ತು ಫಿಲ್ ಸಾಲ್ಟ್ (46 ರನ್, 30 ಎಸೆತ, 3 ಬೌಂಡರಿ, 2 ಸಿಕ್ಸರ್) ವೇಗವಾಗಿ ಆಡಿದರು. ಸಿಎಸ್‌ಕೆ ಬೌಲರ್‌ಗಳಲ್ಲಿ ಅನ್ಶುಲ್ ಕಾಂಬೋಜ್, ಜೇಮಿ ಓವರ್ಟನ್ ಮತ್ತು ಶಿವಂ ದುಬೆ ತಲಾ ಒಂದು ವಿಕೆಟ್ ಪಡೆದರು.