ಭಾರತೀಯ ಅಂಧರ ಕ್ರಿಕೆಟ್ ಸಂಸ್ಥೆ (ಸಿಎಬಿಐ) ಮತ್ತು ಸಮರ್ಥನಂ ಟ್ರಸ್ಟ್ ಸಹಯೋಗದಲ್ಲಿ ನಡೆಯಲಿರುವ ಟೂರ್ನಿಯಲ್ಲಿ ಒಟ್ಟು 6 ತಂಡಗಳು ಆಡಲಿವೆ. ಆಸ್ಟ್ರೆಲಿಯಾ, ಪಾಕಿಸ್ತಾನ, ನೇಪಾಳ ಮತ್ತು ಅಮೆರಿಕ ಟೂರ್ನಿಯಲ್ಲಿ ಆಡಲಿರುವ ಇತರ 4 ತಂಡಗಳಾಗಿವೆ. ಹೈಬ್ರಿಡ್ ಮಾದರಿಯಲ್ಲಿ ನಡೆಯಲಿರುವ ಟೂರ್ನಿಯಲ್ಲಿ ಪಾಕಿಸ್ತಾನ ತಂಡ ತನ್ನ ಪಂದ್ಯಗಳನ್ನು ಶ್ರೀಲಂಕಾದ ಕೊಲಂಬೊದಲ್ಲಿ ನಡೆಯಲಿದೆ. ರೌಂಡ್ ರಾಬಿನ್ ಲೀಗ್ ಬಳಿಕ ಅಂಕಪಟ್ಟಿಯ ಅಗ್ರ 4 ತಂಡಗಳು ಸೆಮಿಫೈನಲ್ಗೇರಲಿವೆ.