ರೆಡಿಯಾಗಿರಿ... ಟೀಮ್​ ಇಂಡಿಯಾದ ಹೀನಾಯ ಸೋಲಿನ ಬೆನ್ನಲ್ಲೇ ಶಾಹಿದ್​ ಅಫ್ರಿದಿ ಕೊಟ್ಟ ಹೇಳಿಕೆ ವೈರಲ್! Shahid Afridi ​

ಟೀಮ್​ ಇಂಡಿಯಾದ ಹೀನಾಯ ಸೋಲಿನ ಬೆನ್ನಲ್ಲೇ ಶಾಹಿದ್​ ಅಫ್ರಿದಿ ಕೊಟ್ಟ ಹೇಳಿಕೆ ವೈರಲ್! Shahid Afridi  ​
ಟೀಮ್​ ಇಂಡಿಯಾದ ಹೀನಾಯ ಸೋಲಿನ ಬೆನ್ನಲ್ಲೇ ಶಾಹಿದ್​ ಅಫ್ರಿದಿ ಕೊಟ್ಟ ಹೇಳಿಕೆ ವೈರಲ್! Shahid Afridi ​
Published on

ಪ್ರಮುಖ ಮುಖ್ಯಾಂಶಗಳು

  • ಸೂಪರ್​ 8 ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಟೀಮ್​ ಇಂಡಿಯಾ ಹೀನಾಯ ಸೋಲು
  • ಭಾರತದ ವಿರುದ್ಧ ಪಾಕಿಸ್ತಾನದ ಮಾಜಿ ನಾಯಕ ಶಾಹಿದ್​ ಅಫ್ರಿದಿ ಸಂಚಲನಾತ್ಮಕ ಹೇಳಿಕೆ
  • ಭಾರತ ತಂಡ ವಿಶ್ವಕಪ್ ಟೂರ್ನಿಯಿಂದ ಹೊರಬೀಳುವುದು ಖಚಿತ ಎಂದ ಅಫ್ರಿದಿ
Shahid Afridi : ನಿನ್ನೆ (ಫೆ.22) ನಡೆದ ಟಿ20 ವಿಶ್ವಕಪ್​ನ ಸೂಪರ್​ 8 ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಟೀಮ್​ ಇಂಡಿಯಾ ಹೀನಾಯ ಸೋಲು ಅನುಭವಿಸುತ್ತಿದ್ದಂತೆ, ಪಾಕಿಸ್ತಾನದ ಮಾಜಿ ನಾಯಕ ಶಾಹಿದ್​ ಅಫ್ರಿದಿ ಸಂಚಲನಾತ್ಮಕ ಹೇಳಿಕೆ ನೀಡಿದ್ದಾರೆ. ಭಾರತ ತಂಡ ವಿಶ್ವಕಪ್ ಟೂರ್ನಿಯಿಂದ ಹೊರಬೀಳುವುದು ಖಚಿತ ಎಂದಿದ್ದಾರೆ.
ಟೀಮ್​ ಇಂಡಿಯಾದ ಬ್ಯಾಟಿಂಗ್​ ಕ್ರಮಾಂಕವನ್ನು ನೋಡಿದರೆ, ಪಾಕಿಸ್ತಾನಕ್ಕೂ ಮುನ್ನವೇ ಟೀಂ ಇಂಡಿಯಾ ವಿಶ್ವಕಪ್​ ಟೂರ್ನಮೆಂಟ್​ನಿಂದ ಹೊರಬೀಳುವಂತೆ ಕಾಣುತ್ತಿದೆ ಎಂದು ಅಫ್ರಿದಿ ನೀಡಿರುವ ಹೇಳಿಕೆಗಳು ಇದೀಗ ತೀವ್ರ ಸಂಚಲನ ಮೂಡಿಸುತ್ತಿವೆ.
ಟಿ20 ವಿಶ್ವಕಪ್ ಸೂಪರ್ 8ರ ಭಾಗವಾಗಿ ನಿನ್ನೆ (ಫೆ.22) ದಕ್ಷಿಣ ಆಫ್ರಿಕಾ ಮತ್ತು ಟೀಮ್ ಇಂಡಿಯಾ ನಡುವೆ ಪಂದ್ಯ ನಡೆದಿದ್ದು ಗೊತ್ತೇ ಇದೆ. ಗುಜರಾತಿನ ಅಹಮದಾಬಾದ್‌ನಲ್ಲಿರುವ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಟೀಮ್ ಇಂಡಿಯಾ, ದಕ್ಷಿಣ ಆಫ್ರಿಕಾ ವಿರುದ್ಧ 76 ರನ್‌ಗಳ ಹೀನಾಯ ಸೋಲು ಅನುಭವಿಸಿತು. ದಕ್ಷಿಣ ಆಫ್ರಿಕಾ ನೀಡಿದ್ದ 188 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಟೀಮ್ ಇಂಡಿಯಾ 111 ರನ್‌ಗಳಿಗೆ ಸರ್ವಪತನ ಕಂಡಿತು. ಇದರೊಂದಿಗೆ ಸೂರ್ಯಕುಮಾರ್ ಯಾದವ್ ಪಡೆ, ದಕ್ಷಿಣ ಆಫ್ರಿಕಾ ವಿರುದ್ಧ 76 ರನ್‌ಗಳಿಂದ ಸೋಲು ಕಂಡಿತು. ಈ ಪಂದ್ಯದಲ್ಲಿ ಹೀನಾಯವಾಗಿ ಸೋಲುಂಡ ಬಳಿಕ ಟೀಮ್ ಇಂಡಿಯಾದ ಸೆಮಿಫೈನಲ್ ಹಾದಿ ಕಠಿಣವಾಗಿದೆ. ಸೆಮೀಸ್​ಗೆ ಹೋಗಬೇಕಾರೆ, ಟೀಮ್ ಇಂಡಿಯಾ ಖಂಡಿತವಾಗಿಯೂ ಉಳಿದ ಎರಡೂ ಪಂದ್ಯಗಳನ್ನು ಭಾರಿ ಅಂತರದಿಂದ ಗೆಲ್ಲಬೇಕು. ಜಿಂಬಾಬ್ವೆ ಮತ್ತು ವೆಸ್ಟ್ ಇಂಡೀಸ್ ವಿರುದ್ಧ ಗೆದ್ದರೆ ಮಾತ್ರ ಸೆಮಿಫೈನಲ್‌ಗೆ ಅವಕಾಶವಿರುತ್ತದೆ. ಇಲ್ಲದಿದ್ದರೆ, ಟೂರ್ನಿಯಿಂದ ಮನೆಗೆ ಹೋಗಬೇಕಾಗುತ್ತದೆ.

ಹೊರಹೋಗುವ ಸಾಧ್ಯತೆಯಿದೆ

ಅಹಮದಾಬಾದ್‌ನಲ್ಲಿ ನಡೆದ ಪಂದ್ಯದಲ್ಲಿ ಟೀಮ್ ಇಂಡಿಯಾ ಸೋಲಿನ ಬಗ್ಗೆ ಮಾತನಾಡಿರುವ ಶಾಹಿದ್ ಅಫ್ರಿದಿ, ದಕ್ಷಿಣ ಆಫ್ರಿಕಾದ ಹೊಡೆತದಿಂದ ಟೀಮ್ ಇಂಡಿಯಾ ಟೂರ್ನಿಯಿಂದ ಹೊರಬೀಳುವ ಪರಿಸ್ಥಿತಿಯಲ್ಲಿದೆ. ನಮ್ಮ ಪಾಕಿಸ್ತಾನ ತಂಡಕ್ಕಿಂತ ಮೊದಲೇ ಟೀಮ್ ಇಂಡಿಯಾ ಹೊರಹೋಗುವ ಸಾಧ್ಯತೆಯಿದೆ. ಗ್ರೂಪ್ ಹಂತದಲ್ಲಿ ಟೀಮ್ ಇಂಡಿಯಾ ಯಾವಾಗಲೂ ಅದ್ಭುತವಾಗಿ ಆಡುತ್ತದೆ. ಆದರೆ, ಸೂಪರ್ 8 ನಂತಹ ಹಂತಕ್ಕೆ ಬಂದಾಗ, ಟೀಮ್ ಇಂಡಿಯಾ ಆಟಗಾರರು ಕೈ ಎತ್ತುತ್ತಾರೆ ಎಂದು ಶಾಹಿದ್ ಅಫ್ರಿದಿ ಹೇಳಿದ್ದಾರೆ.

ಸೋಲಲು ಸಿದ್ಧರಾಗಿರಬೇಕು

ನರೇಂದ್ರ ಮೋದಿಯವರ ತವರು ಗುಜರಾತಿನ ಅಹಮದಾಬಾದ್‌ನಲ್ಲಿ ಟೀಮ್ ಇಂಡಿಯಾದ ಸೋಲು, ಅವರ ಪತನದ ಆರಂಭ ಎಂದು ಅಫ್ರಿದಿ ನಾಲಿಗೆ ಹರಿಬಿಟ್ಟಿದ್ದಾರೆ. ಇದೇ ಸಂದರ್ಭದಲ್ಲಿ ಟೀಮ್ ಇಂಡಿಯಾವನ್ನು ಸೋಲಿಸಿದ್ದಕ್ಕಾಗಿ ದಕ್ಷಿಣ ಆಫ್ರಿಕಾವನ್ನು ಅಫ್ರಿದಿ ಅಭಿನಂದಿಸಿದ್ದಾರೆ. ಜಿಂಬಾಬ್ವೆ ವಿರುದ್ಧವೂ ಸೋಲಲು ಸಿದ್ಧರಾಗಿರಬೇಕು ಎಂದು ಟೀಮ್ ಇಂಡಿಯಾವನ್ನು ಅಫ್ರಿದಿ ಕೆಣಕ್ಕಿದ್ದಾರೆ.
ನಿನ್ನೆಯ ಪಂದ್ಯದ ಫಲಿತಾಂಶ
ಪಂದ್ಯದ ವಿಚಾರಕ್ಕೆ ಬರುವುದಾದರೆ, ನಿನ್ನೆ (ಫೆ.22) ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ದಕ್ಷಿಣ ಆಫ್ರಿಕಾ, ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್‌ಗಳ ನಷ್ಟಕ್ಕೆ 187 ರನ್ ಗಳಿಸಿತು. ಪ್ರೋಟಿಯಸ್​ ಬ್ಯಾಟ್ಸ್‌ಮನ್‌ಗಳಲ್ಲಿ ಡೇವಿಡ್ ಮಿಲ್ಲರ್ (63 ರನ್​, 35 ಎಸೆತ, 7 ಬೌಂಡರಿ, 3 ಸಿಕ್ಸರ್‌ಗಳು) ಅದ್ಭುತ ಅರ್ಧಶತಕ ಗಳಿಸಿದರು. ಜೂನಿಯರ್​ ಎಬಿಡಿ ಎಂದೇ ಖ್ಯಾತಿಯಾಗಿರುವ ಡೆವಾಲ್ಡ್ ಬ್ರೆವಿಸ್ (45 ರನ್​, 29 ಎಸೆತ, 3 ಬೌಂಡರಿಗಳು, 3 ಸಿಕ್ಸರ್‌ಗಳು) ಮತ್ತು ಡೆತ್​ ಓವರ್​ಗಳಲ್ಲಿ ಅದ್ಭುತ ಬ್ಯಾಟಿಂಗ್​ ಮಾಡುವಲ್ಲಿ ಹೆಸರಾಗಿರುವ ಟ್ರಿಸ್ಟಾನ್ ಸ್ಟಬ್ಸ್ (ಅಜೇಯ 44 ರನ್​, 24 ಎಸೆತ, 1 ಬೌಂಡರಿ, 3 ಸಿಕ್ಸರ್‌ಗಳು) ಸಿಡಿಲಬ್ಬರದ ಬ್ಯಾಟಿಂಗ್​ ಪ್ರದರ್ಶನ ನೀಡಿದರು. ಭಾರತೀಯ ಬೌಲರ್‌ಗಳಲ್ಲಿ ಜಸ್ಪ್ರೀತ್ ಬುಮ್ರಾ ಮೂರು ವಿಕೆಟ್ ಪಡೆದರೆ, ಅರ್ಷದೀಪ್​ ಸಿಂಗ್​ ಎರಡು ವಿಕೆಟ್ ಪಡೆದರು. ವರುಣ್ ಚಕ್ರವರ್ತಿ ಮತ್ತು ಶಿವಂ ದುಬೆ ತಲಾ ಒಂದು ವಿಕೆಟ್ ಪಡೆದರು.
ಆಫ್ರಿಕಾ ಪಡೆ ನೀಡಿದ ಸವಾಲಿನ ಗುರಿಯನ್ನು ಬೆನ್ನಟ್ಟಿದ ಭಾರತ 18.5 ಓವರ್‌ಗಳಲ್ಲಿ 111 ರನ್‌ಗಳಿಗೆ ಆಲೌಟ್ ಆಯಿತು. ಶಿವಂ ದುಬೆ (42 ರನ್​, 37 ಎಸೆತ, 1 ಬೌಂಡರಿ, 3 ಸಿಕ್ಸರ್) ಭಾರತದ ಪರ ಗರಿಷ್ಠ ಸ್ಕೋರರ್​ ಎನಿಸಿಕೊಂಡರು. ತಂಡದ ಉಳಿದ ಆಟಗಾರರು ಬ್ಯಾಟಿಂಗ್​ನಲ್ಲಿ ವಿಫಲರಾದ್ದರಿಂದ ಟೀಮ್​ ಇಂಡಿಯಾ ಸೋಲಬೇಕಾಯಿತು. ದಕ್ಷಿಣ ಆಫ್ರಿಕಾದ ಬೌಲರ್‌ಗಳಲ್ಲಿ ಮಾರ್ಕೊ ಜಾನ್ಸೆನ್ ನಾಲ್ಕು ವಿಕೆಟ್ ಪಡೆದರೆ, ಕೇಶವ್ ಮಹಾರಾಜ್ ಮೂರು ವಿಕೆಟ್ ಪಡೆದರು. ಕಾರ್ಬಿನ್ ಬಾಷ್ ಎರಡು ವಿಕೆಟ್ ಪಡೆದರೆ, ಐಡೆನ್ ಮಾರ್ಕ್ರಾಮ್ ಒಂದು ವಿಕೆಟ್ ಪಡೆದರು, (ಏಜೆನ್ಸೀಸ್​).
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net