ಹರಾರೆ: ಟಿ20 ಹಾಲಿ ವಿಶ್ವ ಚಾಂಪಿಯನ್ ಭಾರತ ತಂಡ ನೂತನ ನಾಯಕ ಶ್ರೇಯಸ್ ಅಯ್ಯರ್ ಸಾರಥ್ಯದಲ್ಲಿ ಮೊದಲ ಚುಟುಕು ಸರಣಿ ಜಯಿಸಿದೆ. ವಿಕೆಟ್ ಕೀಪರ್-ಬ್ಯಾಟರ್ ಇಶಾನ್ ಕಿಶನ್ (81* ರನ್, 44 ಎಸೆತ, 9 ಬೌಂಡರಿ, 2 ಸಿಕ್ಸರ್) ಬಿರುಸಿನಾಟದ ಜತೆಗೆ ಉಪನಾಯಕ ತಿಲಕ್ ವರ್ಮ (60* ರನ್, 29 ಎಸೆತ, 5 ಬೌಂಡರಿ, 3 ಸಿಕ್ಸರ್) ಆಕರ್ಷಕ ಬ್ಯಾಟಿಂಗ್ ನೆರವಿನಿಂದ ಭಾರತ ತಂಡ ಎರಡನೇ ಟಿ20 ಪಂದ್ಯದಲ್ಲಿ ಆತಿಥೇಯ ಜಿಂಬಾಬ್ವೆ ಎದುರು 90 ರನ್‌ಗಳ ಭರ್ಜರಿ ಗೆಲುವು ದಾಖಲಿಸಿತು. ಇದರೊಂದಿಗೆ ಮೂರು ಪಂದ್ಯಗಳ ಸರಣಿಯಲ್ಲಿ 2-0ಯಿಂದ ಮೇಲುಗೈ ಸಾಧಿಸಿದ್ದು, ಮೂರನೇ ಹಾಗೂ ಅಂತಿಮ ಪಂದ್ಯ ಭಾನುವಾರ ಹರಾರೆಯಲ್ಲಿ ನಡೆಯಲಿದೆ.