RCBvsGT: 19ನೇ ಆವೃತಿಯ ಐಪಿಎಲ್ನ ಬಹುನಿರೀಕ್ಷಿತ ಕ್ವಾಲಿಫೈಯರ್ 1 ಮಹಾಸಮರಕ್ಕೆ ಹಿಮಾಚಲ ಪ್ರದೇಶದ ಧರ್ಮಶಾಲಾ ಕ್ರೀಡಾಂಗಣ ಸಜ್ಜಾಗಿದೆ. ಕ್ರಿಕೆಟ್ ಪ್ರೇಮಿಗಳಲ್ಲಿ ಭಾರಿ ಕುತೂಹಲ ಮೂಡಿಸಿರುವ ಈ ಹೈವೋಲ್ಟೇಜ್ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ (GT) ನಾಯಕ ಶುಭಮನ್ ಗಿಲ್ ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಮಾಡಲು ನಿರ್ಧರಿಸಿದ್ದು, ರಜತ್ ಪಾಟೀದಾರ್ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದ್ದಾರೆ.