ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡ ಶ್ರೀಲಂಕಾ, ಕಿವೀಸ್ ಪಡೆಗೆ ಬ್ಯಾಟ್ ಮಾಡುವಂತೆ ಆಹ್ವಾನಿಸಿತು. ಅಂತೆಯೇ, ಬ್ಯಾಟ್ ಮಾಡಿದ ನ್ಯೂಜಿಲೆಂಡ್ 20 ಓವರ್ ಅಂತ್ಯಕ್ಕೆ 7 ವಿಕೆಟ್ ಕಳೆದಕೊಂಡು 168 ರನ್ ಕಲೆಹಾಕಿತು. ಈ ಸಾಧಾರಣ ಗುರಿಯನ್ನು ಬೆನ್ನತ್ತಿದ ಶ್ರೀಲಂಕಾಗೆ ಆರಂಭಿಕ ಹಂತದಲ್ಲಿ ಮಾತ್ರವಲ್ಲ, ಕೊನೆಯವರೆಗೂ ಪರದಾಡುವ ಪರಿಸ್ಥಿತಿ ನಿರ್ಮಾಣವಾಯಿತು.