ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಎಸ್‌ಆರ್‌ಎಚ್‌ಗೆ ಟ್ರಾವಿಸ್ ಹೆಡ್ (46 ರನ್, 21 ಎಸೆತ) ಮತ್ತು ಅಭಿಷೇಕ್ ಶರ್ಮಾ (48 ರನ್) ಬಿರುಸಿನ ಆರಂಭ ನೀಡಿದರು. ಆದರೆ ಮಧ್ಯಮ ಕ್ರಮಾಂಕದಲ್ಲಿ ದಿಢೀರ್ ಕುಸಿತ ಕಂಡು 118 ರನ್‌ಗಳಿಗೆ 4 ವಿಕೆಟ್ ಕಳೆದುಕೊಂಡಿತು. ಈ ಹಂತದಲ್ಲಿ ಕ್ರೀಸ್‌ಗಿಳಿದ ಹೆನ್ರಿಚ್ ಕ್ಲಾಸೆನ್ ಮತ್ತು ನಿತೀಶ್ ಕುಮಾರ್ ರೆಡ್ಡಿ ಕೆಕೆಆರ್ ಬೌಲರ್‌ಗಳನ್ನು ಮನಬಂದಂತೆ ದಂಡಿಸಿದರು. ಕ್ಲಾಸೆನ್ ಅವರ ಸಿಕ್ಸರ್‌ಗಳ ಸುರಿಮಳೆ ಹೈದರಾಬಾದ್ ಮೊತ್ತವನ್ನು 220ರ ಗಡಿ ದಾಟಿಸುವಲ್ಲಿ ಪ್ರಮುಖ ಪಾತ್ರವಹಿಸಿತು.