ಮುಂಬೈ: ಐಪಿಎಲ್ 2026ರಲ್ಲಿ ಮುಂಬೈ ಇಂಡಿಯನ್ಸ್(SRHvsMI) ತಂಡದ ಕಳಪೆ ಪ್ರದರ್ಶನ ಮುಂದುವರಿದಿದೆ. ಬುಧವಾರ ನಡೆದ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ರಿಯಾನ್ ರಿಕಲ್ಟನ್ ಅವರ ಸ್ಫೋಟಕ ಶತಕದ ಹೊರತಾಗಿಯೂ ಮುಂಬೈ ತಂಡ 6 ವಿಕೆಟ್‌ಗಳ ಸೋಲು ಅನುಭವಿಸಿದೆ. ಈ ಸೋಲಿನೊಂದಿಗೆ ಮುಂಬೈ ಈ ಸೀಸನ್‌ನಲ್ಲಿ ತನ್ನ ಆರನೇ ಪರಾಜಯವನ್ನು ಕಂಡಂತಾಗಿದ್ದು, ಪ್ಲೇ-ಆಫ್ ಹಾದಿಯನ್ನು ಮತ್ತಷ್ಟು ಕಠಿಣಗೊಳಿಸಿಕೊಂಡಿದೆ.