Suryakumar Yadav : ಮಾರ್ಚ್ 28ರಿಂದ ಶುರುವಾಗಿರುವ ಮಹಾ ಕ್ರಿಕೆಟ್ ಉತ್ಸವ ಇಂಡಿಯನ್ ಪ್ರೀಮಿಯರ್ ಲೀಗ್ ( IPL ) ನಲ್ಲಿ ಮುಂಬೈ ಇಂಡಿಯನ್ಸ್ ತಂಡ ಭರ್ಜರಿ ಶುಭಾರಂಭ ಕಂಡಿದೆ. ಭಾನುವಾರ (ಮಾರ್ಚ್ 29) ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಕೋಲ್ಕತ್ತ ನೈಟ್ ರೈಡರ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಮುಂಬೈ ತಂಡ 6 ವಿಕೆಟ್‌ಗಳಿಂದ ಜಯಗಳಿಸಿತು. ಆದಾಗ್ಯೂ, ಈ ಪಂದ್ಯದಲ್ಲಿ ಟೀಮ್ ಇಂಡಿಯಾದ ಟಿ20 ನಾಯಕ ಸೂರ್ಯಕುಮಾರ್ ಯಾದವ್ ಅವರನ್ನು ಇಂಪ್ಯಾಕ್ಟ್ ಪ್ಲೇಯರ್ ಆಗಿ ಆಡಿಸಲಾಯಿತು. ತಂಡದ ಈ ನಿರ್ಧಾರದ ಕುರಿತು ಸಾಮಾಜಿಕ ಜಾಲತಾಣದಲ್ಲಿ ಭಾರಿ ಚರ್ಚೆ ನಡೆಯುತ್ತಿದ್ದು, ಮುಂಬೈ ತಂಡದಲ್ಲಿ ಎಲ್ಲವೂ ಚೆನ್ನಾಗಿದೆಯೇ? ಯಾವುದಾದರೂ ಸಮಸ್ಯೆಗಳಿವೆಯೇ? ಎಂದು ಅನೇಕರು ಪ್ರಶ್ನೆ ಮಾಡುತ್ತಿದ್ದಾರೆ.