ಮುಲ್ಲನ್‌ಪುರ: ಐಪಿಎಲ್‌ನಲ್ಲಿ ಅತಿ ವೇಗದ ಶತಕ ಸಾಧಕ ಎನಿಸುವ ಅವಕಾಶವನ್ನು ಕೂದಲೆಳೆಯಿಂದ ತಪ್ಪಿಸಿಕೊಂಡ 15 ವರ್ಷದ ವೈಭವ್ ಸೂರ್ಯವಂಶಿ (97 ರನ್, 29 ಎಸೆತ, 5 ಬೌಂಡರಿ, 12 ಸಿಕ್ಸರ್) ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ರನ್‌ಪ್ರವಾಹ ಹರಿಸಿದ ರಾಜಸ್ಥಾನ ರಾಯಲ್ಸ್ ತಂಡ 19ನೇ ಆವೃತ್ತಿಯ ಎಲಿಮಿನೇಟರ್ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಎದುರು 47 ರನ್‌ಗಳ ಗೆಲುವು ದಾಖಲಿಸಿತು.ಇದರೊಂದಿಗೆ ರಿಯಾನ್ ಪರಾಗ್ ಬಳಗ ಶುಕ್ರವಾರ ನಡೆಯಲಿರುವ ‘ಸೆಮಿಫೈನಲ್’ ಮಾದರಿಯ ಎರಡನೇ ಕ್ವಾಲಿಫೈಯರ್‌ಗೆ ಅರ್ಹತೆ ಪಡೆದಿದ್ದು, ಪ್ರಶಸ್ತಿ ಸುತ್ತಿಗೇರಲು ಗುಜರಾತ್ ಟೈಟಾನ್ಸ್ ವಿರುದ್ಧ ಸೆಣಸಲಿದೆ. ಪ್ಯಾಟ್ ಕಮ್ಮಿನ್ಸ್ ಪಡೆ 4ನೇ ಸ್ಥಾನದೊಂದಿಗೆ ಅಭಿಯಾನ ಮುಗಿಸಿದೆ.