ಪಂದ್ಯದ ವಿಚಾರಕ್ಕೆ ಬಂದರೆ, ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡ ಇಂಗ್ಲೆಂಡ್, ಭಾರತಕ್ಕೆ ಬ್ಯಾಟ್ ಮಾಡುವಂತೆ ಆಹ್ವಾನಿಸಿತು. ಅಂತೆಯೇ ಬ್ಯಾಟಿಂಗ್ ಮಾಡಿದ ಟೀಮ್ ಇಂಡಿಯಾಗೆ ಸಂಜು ಸ್ಯಾಮ್ಸನ್ (42 ಎಸೆತ 89 ರನ್) ಇಶಾನ್ ಕಿಶನ್ (39), ಶಿವಂ ದುಬೆ (43) ಮತ್ತು ಹಾರ್ದಿಕ್ ಪಾಂಡ್ಯ (27) ಅವರ ಸ್ಪೋಟಕ ಇನ್ನಿಂಗ್ಸ್ ತಂಡದ ಮೊತ್ತವನ್ನು 250ರ ಗಡಿದಾಟಿಸಿತು. 20 ಓವರ್ನಲ್ಲಿ 7 ವಿಕೆಟ್ ನಷ್ಟಕ್ಕೆ ಭಾರತ 253 ರನ್ ಕಲೆಹಾಕಿತು. ಈ ಬೃಹತ್ ಗುರಿಯನ್ನು ಬೆನ್ನತ್ತಿದ ಇಂಗ್ಲೆಂಡ್ಗೆ ಆರಂಭದಲ್ಲೇ ಫಿಲ್ ಸಾಲ್ಟ್ ಅವರ ವಿಕೆಟ್ ದೊಡ್ಡ ಸಂಕಷ್ಟಕ್ಕೆ ದೂಡಿತು. ಅವರ ನಂತರದಲ್ಲಿ, ಜಾಸ್ ಬಟ್ಲರ್ ಮತ್ತು ನಾಯಕ ಹ್ಯಾರಿ ಬ್ರೂಕ್ ವಿಕೆಟ್ಗಳು ಆಂಗ್ಲರಿಗೆ ಸೋಲಿನ ಭೀತಿ ತಂದಿಟ್ಟಿತು. ಇಲ್ಲಿಗೆ ಭಾರತ ಗೆಲ್ಲುವುದು ಬಹುತೇಕ ಖಚಿತ ಎಂದು ಕ್ರಿಕೆಟ್ ಪ್ರಿಯರು ಖುಷಿಯಾಗಿದ್ದರು. ಆದರೆ, ಟೀಮ್ ಇಂಡಿಯಾ ಅಭಿಮಾನಿಗಳಿಗೆ ಜಾಕೆಬ್ ಬೆಥಲ್ ಮತ್ತು ವಿಲ್ ಜ್ಯಾಕ್ಸ್ ತಮ್ಮ ಸ್ಫೋಟಕ ಬ್ಯಾಟಿಂಗ್ ಮೂಲಕ ಬಿಗ್ ಶಾಕ್ ನೀಡಿದರು. ಆದರೆ, ಅಂತಿಮ ಘಟ್ಟದಲ್ಲಿ ಬುಮ್ರಾ ಮತ್ತು ಹಾರ್ದಿಕ್ ಪಾಂಡ್ಯ ಬೌಲಿಂಗ್ ದಾಳಿ ಆಂಗ್ಲರ ಲೆಕ್ಕಾಚಾರಗಳನ್ನೇ ತಲೆಕೆಳಗಾಗಿಸಿತು.