ಎಲ್ಲಿ ಹೋಯಿತು ಆ ನಿನ್ನ ವೀರ ಪ್ರತಾಪ...? ಟೀಮ್​ ಇಂಡಿಯಾ ಸ್ಟಾರ್​ ಬ್ಯಾಟರ್​ಗೆ ನೆಟ್ಟಿಗರ ತರಾಟೆ! Team India

ಎಲ್ಲಿ ಹೋಯಿತು ಆ ನಿನ್ನ ವೀರ ಪ್ರತಾಪ...? ಟೀಮ್​ ಇಂಡಿಯಾ ಸ್ಟಾರ್​ ಬ್ಯಾಟರ್​ಗೆ ನೆಟ್ಟಿಗರ ತರಾಟೆ! Team India
ಎಲ್ಲಿ ಹೋಯಿತು ಆ ನಿನ್ನ ವೀರ ಪ್ರತಾಪ...? ಟೀಮ್​ ಇಂಡಿಯಾ ಸ್ಟಾರ್​ ಬ್ಯಾಟರ್​ಗೆ ನೆಟ್ಟಿಗರ ತರಾಟೆ! Team India
Published on

ಪ್ರಮುಖ ಮುಖ್ಯಾಂಶಗಳು

  • ಟೀಮ್​ ಇಂಡಿಯಾದ ಸ್ಟಾರ್​ ಓಪನಿಂಗ್ ಬ್ಯಾಟ್ಸ್​ಮನ್​ ಅಭಿಷೇಕ್​ ಶರ್ಮಾ ಇಂದು ಟ್ರೋಲ್​ಗೆ ಗುರಿಯಾಗಿದ್ದಾರೆ
  • ಸೂಪರ್​ 8 ಪಂದ್ಯದಲ್ಲಿ ನೀಡಿದ ಕಳಪೆ ಪ್ರದರ್ಶನದಿಂದಾಗಿ ಅಭಿಷೇಕ್​ ವಿರುದ್ಧ ಅಭಿಮಾನಿಗಳು ಗರಂ
  • ವಿಂಡೀಸ್​ ವಿರುದ್ಧ ಪಂದ್ಯದಲ್ಲಿ ಎರಡು ಸುಲಭದ ಕ್ಯಾಚ್‌ಗಳನ್ನು ಡ್ರಾಪ್​ ಮಾಡಿದ ಅಭಿಷೇಕ್
Team India : ತಮ್ಮ ಸ್ಫೋಟಕ ಬ್ಯಾಟಿಂಗ್​ಗೆ ಹೆಸರುವಾಸಿಯಾಗಿದ್ದ ಟೀಮ್​ ಇಂಡಿಯಾದ ಸ್ಟಾರ್​ ಓಪನಿಂಗ್ ಬ್ಯಾಟ್ಸ್​ಮನ್​ ಅಭಿಷೇಕ್​ ಶರ್ಮಾ ಇಂದು ಟ್ರೋಲ್​ಗೆ ಗುರಿಯಾಗಿದ್ದಾರೆ. ​ಕೋಲ್ಕತ್ತಾದ ಈಡನ್​ ಗಾರ್ಡನ್​ ಅಂಗಳದಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಸೂಪರ್​ 8 ಪಂದ್ಯದಲ್ಲಿ ನೀಡಿದ ಕಳಪೆ ಪ್ರದರ್ಶನದಿಂದಾಗಿ, ಅಭಿಮಾನಿಗಳಿಂದ ಅಭಿಷೇಕ್ ಶರ್ಮಾ ತೀವ್ರ ಟೀಕೆಗಳಿಗೆ ಗುರಿಯಾಗಿದ್ದಾರೆ.
ಹೌದು, 2026ರ T20 ವಿಶ್ವಕಪ್‌ನಲ್ಲಿ ಸೂಪರ್-8 ಹಂತದ ವೆಸ್ಟ್ ಇಂಡೀಸ್ ವಿರುದ್ಧ ಪಂದ್ಯದಲ್ಲಿ ಎರಡು ಸುಲಭದ ಕ್ಯಾಚ್‌ಗಳನ್ನು ಡ್ರಾಪ್​ ಮಾಡಿದ ಅಭಿಷೇಕ್ ಶರ್ಮಾ ಇದೀಗ ಸೋಷಿಯಲ್​ ಮೀಡಿಯಾದಲ್ಲಿ ಭಾರೀ ಟ್ರೋಲ್​ಗೆ ಒಳಗಾಗಿದ್ದಾರೆ.
ಸ್ಟಾರ್ ಓಪನರ್ ಅಭಿಷೇಕ್ ಶರ್ಮಾ ತಮ್ಮ ಕಳಪೆ ಫೀಲ್ಡಿಂಗ್‌ ಮತ್ತು ಬ್ಯಾಟಿಂಗ್​ನಿಂದಾಗಿ ಭಾರೀ ಟೀಕೆಗಳನ್ನು ಎದುರಿಸುವಂತಾಗಿದೆ. ಅಭಿಷೇಕ್ ಒಂದೇ ಇನ್ನಿಂಗ್ಸ್‌ನಲ್ಲಿ ಎರಡೂ ಸುಲಭದ ಕ್ಯಾಚ್‌ಗಳನ್ನು ಕೈಚೆಲ್ಲಿದರು, ಇದು ಪಂದ್ಯ ವೀಕ್ಷಿಸಲು ನೆರೆದಿದ್ದ ಅಭಿಮಾನಿಗಳನ್ನು ಕೋಪಗೊಳ್ಳುವಂತೆ ಮಾಡಿತು.
ಎರಡೆರಡೂ ಕ್ಯಾಚ್​ಗಳನ್ನು ಬಿಟ್ಟಿದಲ್ಲದೇ, ಬ್ಯಾಟಿಂಗ್​ನಲ್ಲೂ ಸಹ ಅಭಿಷೇಕ್ ಶರ್ಮಾ ಕೇವಲ 10 ರನ್ ಗಳಿಸಿ ಔಟಾದರು. ಭಾರತ ತಂಡ ಗೆಲ್ಲಲೇಬೇಕಾದ ಮಹತ್ವದ ಪಂದ್ಯದಲ್ಲಿ, ಅಭಿಮಾನಿಗಳಿಗೆ ತೀವ್ರ ನೀರಾಸೆ ಮೂಡಿಸಿ ಈಗ ಅವರ ಕೋಪಕ್ಕೆ ಗುರಿಯಾಗಿದ್ದಂತೂ ಸುಳ್ಳಲ್ಲ.
ಪಂದ್ಯದ ವಿಚಾರಕ್ಕೆ ಬರುವುದಾದರೆ, ಟಾಸ್​ ಗೆದ್ದು ಮೊದಲು ಬೌಲಿಂಗ್ ಆಯ್ದುಕೊಂಡ ಟೀಮ್ ಇಂಡಿಯಾ, ವಿಂಡೀಸ್​ ಪಡೆಗೆ ಬ್ಯಾಟ್​ ಮಾಡುವಂತೆ ಆಹ್ವಾನಿಸಿತು. ಅಂತೆಯೇ ಬ್ಯಾಟಿಂಗ್​​ಗಿಳಿದ ವೆಸ್ಟ್​ ಇಂಡೀಸ್​ ದೈತ್ಯರು, 20 ಓವರ್​ನಲ್ಲಿ ಕೇವಲ 4 ವಿಕೆಟ್​ ನಷ್ಟಕ್ಕೆ 195 ರನ್​ ಕಲೆಹಾಕಿದರು. ಈ ಬೃಹತ್ ಗುರಿಯನ್ನು ಬೆನ್ನತ್ತಿದ ಸೂರ್ಯ ಪಡೆಗೆ, ಆರಂಭಿಕ ಬ್ಯಾಟರ್​ ಸಂಜು ಸ್ಯಾಮ್ಸನ್​ ಅವರ ಸ್ಫೋಟಕ ಇನ್ನಿಂಗ್ಸ್​ ಗೆಲುವಿಗೆ ಪ್ರಮುಖ ಕಾರಣವಾಯಿತು. ಚೇಸಿಂಗ್​ನಲ್ಲಿ ವಿರಾಟ್​ ಕೊಹ್ಲಿ ಬಿಟ್ಟರೆ ಸ್ಯಾಮ್ಸನ್​ ತಂಡವನ್ನು ಗೆಲುವಿನೆಡೆಗೆ ಕೊಂಡೊಯ್ದಿದ್ದು ವಿಶೇಷ.
ಇದೇ ಸಮಯದಲ್ಲಿ ಕೇವಲ 10 ರನ್​ಗೆ ಪೆವಿಲಿಯನ್​ ಹಾದಿ ಹಿಡಿದ ಸ್ಫೋಟಕ ಎಡಗೈ ಬ್ಯಾಟರ್​ಗಳಾದ ಅಭಿಷೇಕ್ ಶರ್ಮ ಮತ್ತು ಇಶಾನ್ ಕಿಶನ್​​ ಅಭಿಮಾನಿಗಳು ಹಾಗೂ ಕ್ರಿಕೆಟ್​ ಪ್ರಿಯರನ್ನು ಮತ್ತೊಮ್ಮೆ ಭಾರೀ ನಿರಾಶೆಗೊಳಿಸಿದರು. ಉಳಿದಂತೆ ಕ್ರೀಸ್​ಗೆ ಬಂದ ಸೂರ್ಯಕುಮಾರ್ ಯಾದವ್​, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ ಹೆಚ್ಚು ಕಾಲ ನಿಲ್ಲಲಿಲ್ಲ. ಆದರೆ, ಏಕಾಂಗಿಯಾಗಿ ಹೋರಾಟ ನಡೆಸಿದ ಸಂಜು, ಇಡೀ ಪಂದ್ಯದ ಪೂರ ಕೂಲ್ ಆಗಿಯೇ ಚೇಸ್​ ಮಾಡಿದ್ದು ನಿಜಕ್ಕೂ ರೋಮಾಂಚಕಕಾರಿ ಆಗಿತ್ತು. ಕಡೆಯ 2 ಓವರ್​ನಲ್ಲಿ ಸ್ಯಾಮ್ಸನ್​ ಮೇಲಿದ್ದ ಒತ್ತಡವನ್ನು ಇಳಿಸಿದ್ದೇ ಶಿವಂ ದುಬೆ ಅವರ ಎರಡು ಬೌಂಡರಿಗಳು. ಕೇವಲ 50 ರನ್​ಗೆ 97 ರನ್​ ಬಾರಿಸಿದ ಸಂಜು ಸ್ಯಾಮ್ಸನ್, ಟೀಮ್ ಇಂಡಿಯಾದ ರೋಚಕ ಗೆಲುವಿನ ರೂವಾರಿ. ಈ ಅದ್ಭುತ ಇನ್ನಿಂಗ್ಸ್​ನಲ್ಲಿ 12 ಬೌಂಡರಿ ಮತ್ತು 4 ಸಿಕ್ಸರ್​ಗಳು ಸೇರಿವೆ. ತನ್ನ ಅಮೋಘ ಬ್ಯಾಟಿಂಗ್​ ಪ್ರದರ್ಶನದಿಂದ ಭಾರತವನ್ನು ಸೆಮಿಫೈನಲ್​ಗೆ ಕೊಂಡೊಯ್ದ ಸಂಜುಗೆ ಇಡೀ ಭಾರತೀಯ ಕ್ರಿಕೆಟ್​ ಪ್ರಿಯರು ಭಾರೀ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ, (ಏಜೆನ್ಸೀಸ್​).
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net