

ನವದೆಹಲಿ: ಟಿ20 ವಿಶ್ವಕಪ್ ಟೂರ್ನಿಯಿಂದಲೂ ಕಾಡುತ್ತಿರುವ ಎಡ ಮೊಣಕಾಲಿನ ಗಾಯದ ಸಮಸ್ಯೆಯಿಂದ ಸಂಪೂರ್ಣವಾಗಿ ಚೇತರಿಸಿಕೊಳ್ಳಲು ವಿಫಲವಾಗಿರುವ ಟೀಮ್ ಇಂಡಿಯಾ ಸ್ಟಾರ್ ವೇಗಿ ಜಸ್‌ಪ್ರೀತ್ ಬುಮ್ರಾ, ಮುಂಬರುವ ಶ್ರೀಲಂಕಾ ವಿರುದ್ಧದ ಎರಡು ಟೆಸ್ಟ್ ಪಂದ್ಯಗಳ ಸರಣಿಯಿಂದ ಹೊರಗುಳಿಯಲಿದ್ದಾರೆ. ಮೊಣಕಾಲಿನಲ್ಲಿ ಇನ್ನು ಕೆಲ ಸಮಸ್ಯೆ ಎದುರಿಸುತ್ತಿರುವ 32 ವರ್ಷದ ಬುಮ್ರಾ ಅವರ ಕಾರ್ಯದೊತ್ತಡ ನಿರ್ವಹಿಸಲು ಮುನ್ನೆಚ್ಚರಿಕೆಯಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.