IND vs NZ T20: ನ್ಯೂಜಿಲೆಂಡ್ ಮತ್ತು ಭಾರತ ನಡುವಿನ ಎರಡನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ 4 ವಿಕೆಟ್ಗಳ ರೋಚಕ ಜಯ ಸಾಧಿಸಿದ್ದು, ಈ ಮೂಲಕ 2-0 ಅಂತರದಲ್ಲಿ ಸರಣಿಯಲ್ಲಿ ಮುನ್ನಡೆ ಕಾಯ್ದುಕೊಂಡಿದೆ.
ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ದುಕೊಂಡ ಟೀಮ್ ಇಂಡಿಯಾ, ಕಿವೀಸ್ ಪಡೆಗೆ ಬ್ಯಾಟ್ ಮಾಡುವಂತೆ ಆಹ್ವಾನಿಸಿತು. 20 ಓವರ್ನಲ್ಲಿ 5 ವಿಕೆಟ್ ನಷ್ಟಕ್ಕೆ ನ್ಯೂಜಿಲೆಂಡ್ 180 ರನ್ಗಳನ್ನು ಕಲೆಹಾಕಿತು. ಈ ಗುರಿಯನ್ನು ಸುಲಭವಾಗಿ ಬೆನ್ನತ್ತಿದ ಭಾರತಕ್ಕೆ, ಆರಂಭಿಕರಾದ ಅಭಿಷೇಕ್ ಶರ್ಮ ಮತ್ತು ಸಂಜು ಸ್ಯಾಮ್ಸನ್, ವೈಭವ್ ಸೂರ್ಯವಂಶಿಯಿಂದ ಉತ್ತಮ ಇನ್ನಿಂಗ್ಸ್ ಬರಲಿಲ್ಲ.
ಈ ವೇಳೆ, ಕ್ರೀಸ್ಗೆ ಅಂಟಿ ನಿಂತ ತಿಲಕ್ ವರ್ಮಾ, 26 ಎಸೆತಗಳಲ್ಲಿ 51 ರನ್ ಸಿಡಿಸಿದರೆ, ನಮನ್ ಧಿರ್ 17 ಎಸೆತಗಳಲ್ಲಿ 31 ರನ್ ಬಾರಿಸಿದರು. ನ್ಯೂಜಿಲೆಂಡ್ ಬೌಲರ್ಗಳನ್ನು ಮೆಟ್ಟಿ ನಿಂತ ಈ ಯುವ ಜೋಡಿ, ಜವಾಬ್ದಾರಿಯುತ ಇನ್ನಿಂಗ್ಸ್ ಮೂಲಕ ತಂಡವನ್ನು ಗೆಲುವಿನೆಡೆಗೆ ಕೊಂಡೊಯ್ಯುವಲ್ಲಿ ಕೊನೆಗೂ ಯಶಸ್ವಿಯಾಯಿತು. ಕೊನೆಯ ಕ್ಷಣದವರೆಗೂ ರೋಚಕತೆಯಿಂದ ಸಾಗಿದ ಪಂದ್ಯದಲ್ಲಿ ಒಂದೇ ಒಂದು ಬಾಲ್ ಇರುವಂತೆ ಟೀಮ್ ಇಂಡಿಯಾ ಗೆಲುವು ಸಾಧಿಸಿತು.
ಇನ್ನು, ತಂಡದ ಪರ ಬೌಲಿಂಗ್ನಲ್ಲಿ ಅರ್ಷದೀಪ್ ಸಿಂಗ್ 33 ರನ್ಗೆ 2 ವಿಕೆಟ್ ಕಬಳಿಸಿದರೆ, ಪ್ರಿನ್ಸ್ ಯಾದವ್ ಮತ್ತು ನಿತೀಶ್ ಕುಮಾರ್ ರೆಡ್ಡಿ ತಲಾ ಒಂದು ವಿಕೆಟ್ ಪಡೆದು ಮಿಂಚಿದರು. ಈ ಮಧ್ಯೆ, ಹಲವು ವರ್ಷಗಳ ನಂತರ ಟೀಮ್ ಇಂಡಿಯಾಗೆ ಕಮ್ಬ್ಯಾಕ್ ಮಾಡಿದ ಭುವನೇಶ್ವರ್ ಕುಮಾರ್ ಅವರ ಮೇಲೆ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗಳು ದುಪ್ಪಟ್ಟಿತ್ತು. ಆದರೆ, ಅವರಿಂದ ಒಂದೂ ವಿಕೆಟ್ ಬರೆದೆ ಹೋಗಿದ್ದು ಬೇಸರ ಮೂಡಿಸಿತು.
ಸರಣಿಯಲ್ಲಿ ಸತತ ಎರಡನೇ ಗೆಲುವು ದಾಖಲಿಸಿರುವ ಟೀಮ್ ಇಂಡಿಯಾ, ಮುಂದಿನ ಪಂದ್ಯವನ್ನೂ ಬ್ಯಾಕ್ ಟು ಬ್ಯಾಕ್ ಗೆಲ್ಲುವ ಮೂಲಕ ಕಿವೀಸ್ ಪಡೆಯಿಂದ ಟಿ20 ಸರಣಿಯನ್ನು ವಶಪಡಿಸಿಕೊಳ್ಳಲು ತುದಿಗಾಲಿನಲ್ಲಿದೆ.